CINE | ಮತ್ತೊಂದು ಬಿಗ್‌ ಬಜೆಟ್‌ ಸಿನಿಮಾ ಸೈನ್‌ ಮಾಡಿದ ರಶ್ಮಿಕಾ ಮಂದಣ್ಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ನಟಿ ರಶ್ಮಿಕಾ ಮಂದಣ್ಣ ಚಿತ್ರರಂಗದಲ್ಲಿ ಗೆಲ್ಲುವ ಕುದುರೆ. ಅವರು ಮುಟ್ಟಿದ್ದೆಲ್ಲ ಚಿನ್ನ. ನಿರ್ಮಾಪಕರ ಪಾಲಿಗೆ ರಶ್ಮಿಕಾ ಅದೃಷ್ಟ ಲಕ್ಷ್ಮೀ. ಈ ಕಾರಣದಿಂದಲೇ ನಿರ್ಮಾಪಕರು ಅವರ ಮನೆಯ ಬಾಗಿಲು ತಟ್ಟುವ ಕೆಲಸ ಮಾಡುತ್ತಿದ್ದಾರೆ. ಈಗ  ರಶ್ಮಿಕಾಗೆ ಒಂದು ಬಂಪರ್ ಆಫರ್ ಸಿಕ್ಕಿದೆ. ಅವರು ಅಲ್ಲು ಅರ್ಜುನ್ ಜೊತೆ ಮತ್ತೆ ಸಿನಿಮಾ ಮಾಡಲಿದ್ದಾರೆ.

ಅಲ್ಲು ಅರ್ಜುನ್ ಟಾಲಿವುಡ್​ನ ಬೇಡಿಕೆಯ ಹೀರೋ. ಅವರು ‘ಪುಷ್ಪ’ ಹಾಗೂ ‘ಪುಷ್ಪ 2’ ಚಿತ್ರದಲ್ಲಿ ರಶ್ಮಿಕಾ ಜೊತೆ ನಟಿಸಿದ್ದರು. ಈ ಎರಡೂ ಚಿತ್ರಗಳು ಯಶಸ್ಸು ಕಂಡಿದ್ದು ಗೊತ್ತೇ ಇದೆ. ಈಗ ಇವರಿಬ್ಬರೂ ಮತ್ತೊಂದು ಸಿನಿಮಾಗಾಗಿ ಒಂದಾಗುತ್ತಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡಿದೆ. ಈ ವಿಚಾರ ರಶ್ಮಿಕಾ ಫ್ಯಾನ್ಸ್ ಖುಷಿ ಹೆಚ್ಚಿಸಿದೆ.

ಸನ್ ಪಿಕ್ಚರ್ಸ್ ನಿರ್ಮಾಣದ ‘AA22xA6’ ಚಿತ್ರದಲ್ಲಿ ಅಲ್ಲು ಅರ್ಜುನ್ ಹಾಗೂ ಅಟ್ಲಿ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿನಿಮಾ ಈಗಾಗಲೇ ಸೆಟ್ಟೇರಿದ್ದು, 2026ರ ಕೊನೆ ಅಥವಾ 2027ರ ಆರಂಭದಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ, ಜಾನ್ವಿ ಕಪೂರ್ ಹಾಗೂ ಮೃಣಾಲ್ ಠಾಕೂರ್ ಇರೋದು ಖಚಿತವಾಗಿದೆ. ಇವರ ಜೊತೆ ರಶ್ಮಿಕಾ ಕೂಡ ನಟಿಸುತ್ತಿದ್ದಾರೆ. ಆದರೆ, ಈ ಬಾರಿ ಅಲ್ಲು ಅರ್ಜುನ್ ಜೊತೆ ರೊಮ್ಯಾನ್ಸ್ ಮಾಡೋ ಅವಕಾಶ ನಟಿಗೆ ಸಿಗೋದಿಲ್ಲ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!