ಹೊಸದಿಗಂತ ಡಿಜಿಟಲ್ ಡೆಸ್ಕ್:
ಸದ್ಯ ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ. ಆದರೆ ಇಂದಲ್ಲ ನಾಳೆ ಡಿ.ಕೆ.ಶಿವಕುಮಾರ್ ಸಿಎಂ ಆಗೇ ಆಗ್ತಾರೆ ಎಂದು ಕಾಂಗ್ರೆಸ್ ಶಾಸಕ ರಂಗನಾಥ್ ತಿಳಿಸಿದ್ದಾರೆ.
ಸಿಎಂ, ಡಿಸಿಎಂ ದೆಹಲಿಗೆ ಹೋಗಿದ್ದಾರೆ. ಕೇಂದ್ರ ಮತ್ತು ರಾಜ್ಯದ ನಾಯಕರ ಮಟ್ಟದ ಚರ್ಚೆ ಮಾಡ್ತಾರೆ. ರಾಜ್ಯ ಸರ್ಕಾರ ದೇಶದಲ್ಲಿ ಮುಖ್ಯವಾದ ಸ್ಥಾನದಲ್ಲಿದೆ ಎಂದರು. ಬಿಜೆಪಿಗೆ ಸೆಡ್ಡು ಹೊಡೆದು ಕಾಂಗ್ರೆಸ್ ಸರ್ಕಾರ ಬಡವರ ಜೊತೆ ಇದ್ದೇವೆ ಎಂದು ತೋರಿಸಿದ್ದೇವೆ. ಹಾಗಾಗಿ ಕಾಂಗ್ರೆಸ್ ಪಕ್ಷದ ಹಿರಿಯರಿಗೆ ಯಾವ ರೀತಿ ಬಲ ಕೊಡಬೇಕು ಎಂದು ಮಾತಾಡಿರಬಹುದು ಎಂದು ಭಾವಿಸುತ್ತೇನೆ ಎಂದು ಹೇಳಿದ್ದಾರೆ.