ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಯೆಮೆನ್ನಲ್ಲಿ ಜೈಲಿನಲ್ಲಿರುವ ಮಲಯಾಳಿ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆ ವಿಚಾರದಲ್ಲಿ ತುರ್ತಾಗಿ ಮಧ್ಯಪ್ರವೇಶಿಸುವಂತೆ ರಾಷ್ಟ್ರಪತಿಗಳಿಗೆ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಬರೆದ ಪತ್ರ ಬರೆದಿದ್ದಾರೆ.
ಜೊತೆಗೆ ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಅವರ ಪ್ರಾಣ ಉಳಿಸಲು ಕೇಂದ್ರ ಸರ್ಕಾರ ತುರ್ತಾಗಿ ಮಧ್ಯಪ್ರವೇಶಿಸಬೇಕೆಂದು ಜೋಸ್ ಕೆ. ಮಾಣಿ ಪತ್ರದಲ್ಲಿ ಒತ್ತಾಯಿಸಿದ್ದಾರೆ. ಜುಲೈ 16 ರಂದು ನಿಮಿಷಾ ಪ್ರಿಯಾ ಅವರ ಮರಣದಂಡನೆ ಜಾರಿಯಾಗಲಿದೆ ಎಂದು ಮಾಹಿತಿ ಲಭ್ಯವಾಗಿದೆ.
ಇದೇ ವೇಳೆ, ನಿಮಿಷಾ ಪ್ರಿಯಾ ಅವರ ಬಿಡುಗಡೆಗೆ ತುರ್ತಾಗಿ ಕೇಂದ್ರ ಮಧ್ಯಪ್ರವೇಶಿಸಬೇಕೆಂಬ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಲಿದೆ. ಅರ್ಜಿ ಸಂಬಂಧಿತ ಮಾಹಿತಿಯನ್ನು ಅಟಾರ್ನಿ ಜನರಲ್ ಮೂಲಕ ಕೇಂದ್ರ ಸರ್ಕಾರಕ್ಕೆ ತಿಳಿಸಲು ನ್ಯಾಯಾಲಯ ನಿರ್ದೇಶನ ನೀಡಿದೆ.
ಜುಲೈ 16 ರಂದು ನಿಮಿಷಾ ಅವರ ಮರಣದಂಡನೆ ಜಾರಿಯಾಗಲಿದೆ ಎಂಬ ಮಾಹಿತಿ ಇದೆ. ಈ ಸಂದರ್ಭದಲ್ಲಿ ನಿಮಿಷಾ ಪ್ರಿಯಾ ಅವರ ಪ್ರಾಣ ಉಳಿಸಲು ತುರ್ತಾಗಿ ಮಧ್ಯಪ್ರವೇಶಿಸಬೇಕು. ಕೇಂದ್ರ ಸರ್ಕಾರದ ಪರಿಣಾಮಕಾರಿ ಮಧ್ಯಪ್ರವೇಶದಿಂದ ಮಾತ್ರ ಇದು ಸಾಧ್ಯ ಎಂದು ಸೇವ್ ನಿಮಿಷಾ ಪ್ರಿಯಾ ಆಕ್ಷನ್ ಕೌನ್ಸಿಲ್ ಅರ್ಜಿ ಸಲ್ಲಿಸಿದೆ.