BIG NEWS | ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ: ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಬಸ್‌ ಫ್ರೀ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯಕ್ಕಾಗಿ ಮಹತ್ವದ ಘೋಷಣೆಯೊಂದನ್ನು ಮಾಡಿದೆ. ಇನ್ನುಮುಂದೆ ಎಲ್ಲಾ ಸರ್ಕಾರಿ ಶಾಲೆಯ ಮಕ್ಕಳಿಗೆ ಬಸ್‌ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಇದೆ.

ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ. ಈ ಕುರಿತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌  ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

Image

ಸರ್ಕಾರಿ ಶಾಲೆಯ ಮಕ್ಕಳ ಹಾಜರಾತಿ, ಗುಣಮಟ್ಟ ಹೆಚ್ಚಿಸಲು ಸರ್ಕಾರದಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಅದಕ್ಕಾಗಿ ಕರ್ನಾಟಕ ಪಬ್ಲಿಕ್‌ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಅನುಕೂಲ ಕಲ್ಪಿಸಲು ಉಚಿತ ಬಸ್‌ ವ್ಯವಸ್ಥೆಯನ್ನ ಸರ್ಕಾರ ನೀಡಲಿದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!