ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಲಂಧರ್ ನಗರದ ಮಾಡೆಲ್ ಟೌನ್ ಪ್ರದೇಶದಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಲಕ್ಕಿ ಒಬೆರಾಯ್ ಅವರನ್ನು ಅಪರಿಚಿತರು ಹಾಡಹಗಲೇ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಶುಕ್ರವಾರ ನಡೆದಿದೆ.
ಗುರುದ್ವಾರದ ಸಮೀಪ ಈ ದಾಳಿ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮಾಹಿತಿಯ ಪ್ರಕಾರ, ಒಬೆರಾಯ್ ತಮ್ಮ ವಾಹನದಲ್ಲಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳು ಅವರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದರು. ಹಲವು ಸುತ್ತು ಗುಂಡು ಹಾರಿಸಿದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ರಕ್ತದ ಮಡುವಿನಲ್ಲಿ ಬಿದ್ದರು.
ಇದನ್ನೂ ಓದಿ:
ತಕ್ಷಣವೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಲಾಯಿತಾದರೂ, ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ದಾಳಿಯ ಹಿಂದೆ ಇರುವ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ದಾಳಿಕೋರರು ಘಟನೆಯ ಬಳಿಕ ಪರಾರಿಯಾಗಿದ್ದು, ಅವರ ಪತ್ತೆಗೆ ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.



