ಸಿಎಂ ಬದಲಾವಣೆ ಕುರಿತ ಚರ್ಚೆಗೆ ಅರ್ಥವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

“ಮುಖ್ಯಮಂತ್ರಿ ಬದಲಾವಣೆಯ ನಿರ್ಧಾರ ಸಂಪೂರ್ಣವಾಗಿ ಹೈಕಮಾಂಡ್‌ಗೆ ಸೇರಿದ್ದು, ಅವರು ಈವರೆಗೆ ಈ ವಿಷಯವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಹೀಗಿರುವಾಗ ನಾವು ಹೇಳುವ ಅಥವಾ ಮಾಧ್ಯಮದಲ್ಲಿ ನಡೆಯುತ್ತಿರುವ ಚರ್ಚೆಗಳಿಗೆ ಅರ್ಥವಿಲ್ಲ,” ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.

ಶನಿವಾರ ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, “ಸಿಎಂ ಬದಲಾವಣೆ ಕುರಿತು ಪಕ್ಷದ ಹಿರಿಯ ನಾಯಕರು ಮಲ್ಲಿಕಾರ್ಜುನ ಖರ್ಗೆ ಮತ್ತು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಈವರೆಗೆ ಯಾರೊಂದಿಗೂ ಚರ್ಚೆ ನಡೆಸಿಲ್ಲ. ಬದಲಾವಣೆಯ ಅಧಿಕಾರ ಹೊಂದಿರುವವರು ಮಾತಾಡದೆ ಇರುವಾಗ, ಇತರರು ಈ ವಿಷಯವನ್ನು ಚರ್ಚಿಸುವುದು ಅಪ್ರಸ್ತುತ,” ಎಂದು ಹೇಳಿದರು.

ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರು ಶಾಸಕರೊಂದಿಗೆ ಸಭೆ ನಡೆಸಿದ್ದು, “ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸದಲ್ಲಿ ಎಲ್ಲರೂ ಹೆಚ್ಚು ತೊಡಗಿಸಿಕೊಳ್ಳಬೇಕು” ಎಂಬ ಸೂಚನೆ ನೀಡಿದ್ದಾರೆ ಎಂದು ಖರ್ಗೆ ತಿಳಿಸಿದರು. ಕೆಪಿಸಿಸಿ ಅಧ್ಯಕ್ಷ ಬದಲಾವಣೆ ವಿಚಾರಕ್ಕೂ ಯಾವುದೇ ಚರ್ಚೆ ನಡೆದಿಲ್ಲವಂತೆ. “ಈ ಎಲ್ಲ ನಿರ್ಧಾರಗಳು ಹೈಕಮಾಂಡ್ ಮಟ್ಟದಲ್ಲಿ ತೆಗೆದುಕೊಳ್ಳಲಾಗುತ್ತದೆ,” ಎಂದು ಅವರು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Logged in as Ashika HD. Log out?

Please enter your comment!

error: Content is protected !!