ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಸ್ ಚಲಾಯಿಸುತ್ತಿರುವಾಗ ಚಾಲಕನಿಗೆ ಎದೆನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗಮಧ್ಯೆ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಮೃತ ಚಾಲಕನನ್ನು ಆರ್ ಪಿ ಕೆ ಖಾಸಗಿ ಬಸ್ಸಿನ ಚಾಲಕ ಗುರುಸಿದ್ದು (55) . ಕೊಳ್ಳೇಗಾಲದಿಂದ ಚಾಮರಾಜನಗರಕ್ಕೆ ಆರ್ ಪಿಕೆ ಖಾಸಗಿ ಬಸ್ ಚಲಾಯಿಸಿಕೊಂಡು ಗುರುಸಿದ್ದು ತೆರಳುತ್ತಿದ್ದರು. ಬಸ್ ಚಾಲನೆ ಮಾಡುವಾಗಲೇ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಕರೆತರುತ್ತಿದ್ದಾಗ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾರೆ.