ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ಮೂರನೇ ದಿನದಾಟ ಆರಂಭವಾಗಿದ್ದು, ಕನ್ನಡಿಗ ಕೆ.ಎಲ್ ರಾಹುಲ್ ಅವರು ಇಂಗ್ಲೆಂಡ್ ವಿರುದ್ಧ ಅಮೋಘವಾದ ಸೆಂಚುರಿ ಬಾರಿಸುವ ಮೂಲಕ ಟೀಮ್ ಇಂಡಿಯಾಕ್ಕೆ ನೆರವಾಗಿದ್ದಾರೆ.
ಮೊದಲ ಇನ್ನಿಂಗ್ಸ್ನಲ್ಲಿ ಬ್ಯಾಟಿಂಗ್ ಆರಂಭಿಸಿದ್ದ ಟೀಮ್ ಇಂಡಿಯಾ ಆರಂಭದಲ್ಲೇ ಜೈಸ್ವಾಲ್ (13) ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಕರುಣ್ ನಾಯರ್ 40 ರನ್ಗೆ ಬ್ಯಾಟಿಂಗ್ ಮುಗಿಸಿ ಮತ್ತೊಮ್ಮೆ ವಿಫಲರಾದರು. ಎರಡು ಟೆಸ್ಟ್ಗಳಲ್ಲಿ ಶತಕ ಸಿಡಿಸಿದ್ದ ನಾಯಕ ಶುಭ್ಮನ್ ಗಿಲ್ 3ನೇ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲಿ ಕೇವಲ 16 ರನ್ಗೆ ಕ್ಯಾಚ್ ಕೊಟ್ಟು ಹೊರ ನಡೆದರು. ಆದರೆ ಓಪನರ್ ಆಗಿ ಕ್ರೀಸ್ಗೆ ಆಗಮಿಸಿದ್ದ ಕೆ.ಎಲ್ ರಾಹುಲ್, ಪಂತ್ ಜೊತೆ ಸೇರಿ ಅದ್ಭುತವಾದ ಇನ್ನಿಂಗ್ಸ್ ಕಟ್ಟಿದ್ದಾರೆ.
ಇಂಗ್ಲೆಂಡ್ ವಿರುದ್ಧ ಮತ್ತೊಂದು ಶತಕ ಬಾರಿಸೋ ಮೂಲಕ ಕನ್ನಡಿಗ ಕೆ.ಎಲ್ ರಾಹುಲ್ ಅವರು ಟೀಮ್ ಇಂಡಿಯಾಕ್ಕೆ ನೆರವಾಗಿದ್ದಾರೆ.