ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಮತ್ತೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೇಗವಾಗಿ ಸಾಗುತ್ತಿದ್ದ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಇನ್ನೊಬ್ಬನ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆ ರಾಮನಗರ ತಾಲೂಕಿನ ಜಯಪುರಗೇಟ್ ಬಳಿ ಬೆಳಿಗ್ಗೆ ನಡೆದಿದೆ. ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಘಟನೆಯ ಮಾಹಿತಿ ಪಡೆದುಕೊಂಡ ಸಂಚಾರಿ ಪೊಲೀಸ್ ಇಲಾಖೆ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಲಾಗಿದೆ. ಅಪಘಾತದ ಪರಿಣಾಮ ವಾಹನಗಳ ಸಂಚಾರದಲ್ಲಿ ಕೆಲ ಕಾಲ ಅಡಚಣೆ ಉಂಟಾಯಿತು.