ಸೈನಾ ನೆಹ್ವಾಲ್‌ ದಾಂಪತ್ಯ ಜೀವನದಲ್ಲಿ ಬಿರುಕು: ಡಿವೋರ್ಸ್‌ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತೆ ಸೈನಾ ನೆಹ್ವಾಲ್‌ ಮತ್ತು ಮತ್ತು ಪರುಪಳ್ಳಿ ಕಶ್ಯಪ್ ದಂಪತಿ ಪರಸ್ಪರ ಬೇರ್ಪಡುವ ನಿರ್ಧಾರವನ್ನು ಪ್ರಕಟಿಸಿದ್ದಾರೆ.

35 ವರ್ಷ ವಯಸ್ಸಿನ ಸೈನಾ ಅವರು ಇನ್‌ಸ್ಟಾಗ್ರಾಮ್‌ನಲ್ಲಿಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. 2018ರಲ್ಲಿ ಬ್ಯಾಡ್ಮಿಂಟನ್‌ ಆಟಗಾರನಾಗಿದ್ದ ಕಶ್ಯಪ್ ಅವರನ್ನು ಸೈನಾ ವಿವಾಹವಾಗಿದ್ದರು.

ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ನೆಹ್ವಾಲ್, ಜೀವನವು ಕೆಲವೊಮ್ಮೆ ನಮ್ಮನ್ನು ವಿಭಿನ್ನ ದಿಕ್ಕುಗಳಲ್ಲಿ ಕರೆದೊಯ್ಯುತ್ತದೆ. ಸಾಕಷ್ಟು ಆಲೋಚನೆಯ ನಂತರ ನಾವಿಬ್ಬರು ಬೇರೆಯಾಗಲು ನಿರ್ಧರಿಸಿದ್ದೇವೆ ಎಂದು ಬರೆದಿದ್ದಾರೆ.

Badminton Player Saina Nehwal announces separation from husband Parupalli Kashyap

ನೆನಪುಗಳಿಗೆ ನಾನು ಕೃತಜ್ಞನಾಗಿದ್ದೇನೆ ಮತ್ತು ಮುಂದುವರಿಯಲು ಉತ್ತಮವಾದದ್ದನ್ನು ಮಾತ್ರ ಬಯಸುತ್ತೇನೆ. ಈ ಸಮಯದಲ್ಲಿ ನಮ್ಮ ಖಾಸಗಿತನವನ್ನು ಗೌರವಿಸುತ್ತೀರಿ ಎಂದು ಭಾವಿಸುತ್ತೇನೆ ಎಂದು ಸೈನಾ ಹೇಳಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!