ಹೊಸದಿಗಂತ ವರದಿ ಕಲಬುರಗಿ:
ಮಾದಕದ್ರವ್ಯ ಸಾಗಾಣಿಕೆ ಆರೋಪದಡಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ, ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿಯನ್ನು ಅರೆಸ್ಟ್ ಮಾಡಲಾಗಿದೆ.
ನೆರೆಯ ಮಹಾರಾಷ್ಟ್ರ ರಾಜ್ಯದ ಥಾಣೆ ನಗರದಲ್ಲಿ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ವೇಳೆ ಕಲಬುರಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿಯನ್ನು ಬಂಧನ ಮಾಡಲಾಗಿದ್ದು, ನಿಷೇಧಿತ 120 ಬಾಟಲ್ ಕೊಡೆನೈನ್ ಸಿರಪ್ ಹೊಂದಿದ ಆರೋಪದಡಿಯಲ್ಲಿ ಬಂಧಿಸಲಾಗಿದೆ.
ಈ ಕುರಿತು ಎನ್.ಡಿ.ಪಿ.ಎಸ್. ಕಾಯ್ದೆಯಡಿ ಕಲ್ಯಾಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.