ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕರಾವಳಿಯಲ್ಲಿ ಮತ್ತೆ ವರುಣಾರ್ಭಟ ತೀವ್ರಗೊಂಡಿದ್ದು, ಎಲ್ಲೆಡೆ ಇಂದು ಮುಂಜಾನೆಯಿಂದಲೇ ಭಾರೀ ಮಳೆಯಾಗುತ್ತಿದೆ.
ಭಾರೀ ಮಳೆಗೆ ಮಂಗಳೂರು ನಗರದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಅಲ್ಲಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗುತ್ತಿದ್ದು, ಕಳೆದ ಕೆಲವು ದಿನಗಳ ಹಿಂದೆ ಸಂಕಷ್ಟ ಪಟ್ಟಿದ್ದ ಜನತೆಗೆ ಈಗ ಮತ್ತೊಮ್ಮೆ ಕೃತಕ ನೆರೆ ಭೀತಿ ಕಾಡುತ್ತಿದೆ.
ನಗರದ ಹೊರವಲಯ ತೊಕ್ಕೊಟ್ಟು ಪರಿಸರದಲ್ಲಿಯೂ ಮಳೆಗೆ ಅಧ್ವಾನ ಸ್ಥಿತಿ ನಿರ್ಮಾಣವಾಗಿದೆ. ಮಳೆ ನೀರು ಹರಿದುಹೋಗಲು ಸೂಕ್ತ ವ್ಯವಸ್ಥೆ ಇಲ್ಲದೆ ರಸ್ತೆಯಲ್ಲಿಯೇ ತುಂಬಿಕೊಂಡು ವಾಹನ ಸಂಚಾರಕ್ಕೆ ತೀವ್ರ ಅಡ್ಡಿಯುಂಟು ಮಾಡುತ್ತಿದೆ.
ಭಾರೀ ಮಳೆಯ ಹಿನ್ನೆಲೆಯಲ್ಲಿ ಈ ಭಾಗದ ರಾಷ್ಟ್ರೀಯ ಹೆದ್ದಾರಿಗಳಲ್ಲಿಯೂ ವಾಹನ ದಟ್ಟಣೆ ಕಂಡುಬರುತ್ತಿದೆ.