ಕುಳಿತು ಟಿವಿ ಆನ್‌ ಮಾಡುತ್ತಲೇ ಕುಸಿದುಬಿದ್ದರು.. ಸರೋಜಾದೇವಿ ಕೊನೆಯ ಘಳಿಗೆ ಹೀಗಿತ್ತು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಹಿರಿಯ ನಟಿ ಬಿ ಸರೋಜಾದೇವಿ ಇಂದು ಬೆಳಗ್ಗೆ 9 ಗಂಟೆಯ ವೇಳೆಗೆ ವಿಧಿವಶರಾಗಿದ್ದಾರೆ. ಆರು ದಶಕಗಳ ಕಾಲ ಚಿತ್ರರಂಗದಲ್ಲಿ ಮಿಂಚಿದ್ದ ನಟಿ ಇನ್ನಿಲ್ಲವಾಗಿದ್ದಾರೆ. ಸರೋಜಾದೇವರಿ ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ನಟಿಯ ಕೊನೆಯ ಘಳಿಗೆ ಹೇಗಿತ್ತು ಎನ್ನುವ ಮಾಹಿತಿ ಇಲ್ಲಿದೆ..

ಸರೋಜಾದೇವಿ ಅವರು ಪ್ರತಿನಿತ್ಯ ಬೆಳಗ್ಗೆ ಎದ್ದು ಪೇಪರ್‌ ಓದುತ್ತಿದ್ದರು. ನಂತರ ಸ್ನಾನ ಮಾಡಿ ಪೂಜೆ ಮಾಡಿ ತಿಂಡಿ ತಿನ್ನುತ್ತಿದ್ದರು. ಇಂದು ಸ್ನಾನ ಮಾಡಿ ಪೂಜೆ ಮಾಡಿದ ಬಳಿಕ ಬೆಳಗ್ಗೆ 9 ಗಂಟೆಯ ವೇಳೆಗೆ ಟಿವಿ ಆನ್‌ ಮಾಡಿದ್ದರು. ಈ ವೇಳೆ ಅವರು ತುಂಬಾ ಸುಸ್ತಾಗಿದ್ದರು ಮತ್ತು ಅರೆಪ್ರಜ್ಞಾವಸ್ಥೆಗೆ ಹೋದರು. ಕೂಡಲೇ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಿಸುವಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕೊಡಿಗೆಹಳ್ಳಿಯ ತೋಟದಲ್ಲಿ ಒಕ್ಕಲಿಗೆ ಸಂಪ್ರದಾಯದಂತೆ ಮಂಗಳವಾರ ಅಂತ್ಯಕ್ರಿಯೆ ಮಾಡಲು ಕುಟುಂಬಸ್ಥರು ನಿರ್ಧಾರ ತೆಗೆದುಕೊಂಡಿದ್ದಾರೆ. ಈಗ ಮಲ್ಲೇಶ್ವರದಲ್ಲಿರುವ ನಿವಾಸದಲ್ಲಿ ಮೃತದೇಹವನ್ನು ಇರಿಸಲಾಗಿದೆ. ಕಲಾವಿದರು,  ಸಿನಿಮಾ ಕ್ಷೇತ್ರದಲ್ಲಿ ಕೆಲಸ ಮಾಡಿದವರು ನಿವಾಸಕ್ಕೆ ಆಗಮಿಸಿ ಅಂತಿಮ ದರುಶನ ಪಡೆಯುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!