ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿರಿಯ ನಟಿ ಬಿ.ಸರೋಜಾದೇವಿ ಇಂದು ವಿಧಿವಶರಾಗಿದ್ದಾರೆ. ಮಂಗಳವಾರ ಚನ್ನಪಟ್ಟಣದ ದಶಾವರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಸರೋಜಾದೇವಿಯವರ ಮಗ ಗೌತಮ್ ಮಾತನಾಡಿ, ನಾಳೆ ಬೆಳಿಗ್ಗೆ 11:30ರವರೆಗೂ ಬೆಂಗಳೂರಿನ ಸ್ವಗೃಹದ ಬಳಿ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಪಾರ್ಥಿವ ಶರೀರವನ್ನು ಚನ್ನಪಟ್ಟಣಕ್ಕೆ ಕರೆದೊಯ್ಯಲಾಗುವುದು. ಅಲ್ಲಿ ದಶಾವರದ ಕಣ್ವ ಡ್ಯಾಂ ಬಳಿ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
ರೋಜಾದೇವಿ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯೆ ನಿಧನರಾದರು. ಸರೋಜಾದೇವಿ ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮಲ್ಲೇಶ್ವರಂ ಮನೆಯಲ್ಲಿ ಪಾರ್ಥೀವ ಶರೀರದ ಅಂತಿಮ ದರುಶನಕ್ಕೆ ಅವಕಾಶ ನೀಡಲಾಗಿದೆ.