ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಎಲ್ಲಿಯವರೆಗೆ ದೇವರು ಶಕ್ತಿ ಹಾಗೂ ಜನ ಅಧಿಕಾರ ನೀಡುತ್ತಾರೋ ಅಲ್ಲಿಯತನಕ ಯೋಜನೆಗಳು ಮುಂದುವರೆಯುತ್ತವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಶಕ್ತಿ ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣ 500 ಕೋಟಿ ಟ್ರಿಪ್ ಮುಟ್ಟಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನ ವಿಂಡ್ಸರ್ ವೃತ್ತದಲ್ಲಿ ಬಿಎಂಟಿಸಿ ಬಸ್ ನಲ್ಲಿ 500 ನೇ ಕೋಟಿಯ ಟಿಕೆಟ್ ಅನ್ನು ಮಹಿಳಾ ಪ್ರಯಾಣಿಕರಿಗೆ ಸೋಮವಾರ ವಿತರಿಸಿದರು. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಕಾಂಗ್ರೆಸ್ ಪಕ್ಷ ಈ ದೇಶದ ಜನರಿಗೆ ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ನೀಡಿದೆ. ಹಲಾವಾರು ಪಿಂಚಣಿ ಯೋಜನೆಗಳು, ನರೇಗಾ, ಬ್ಯಾಂಕ್ ರಾಷ್ಟ್ರೀಕರಣ ಸೇರಿದಂತೆ ನಮ್ಮ ಯೋಜನೆಗಳನ್ನು ಬಿಜೆಪಿ ಸೇರಿದಂತೆ ಯಾರೂ ಸಹ ನಿಲ್ಲಿಸಲು ಸಾಧ್ಯವಿಲ್ಲ. ಇವು ಜನರ ಹೃದಯ ಹಾಗೂ ಬದುಕಿಗೆ ಬೇಕಾದಂತಹ ಕಾರ್ಯಕ್ರಮಗಳು. ಇವು ನಿರಂತರವಾಗಿರುತ್ತವೆ ಎಂದರು.

ಮಹಿಳೆಯೊಬ್ಬರು ಸಂತೋಷದಿಂದ ನನಗೆ ರೊಟ್ಟಿ, ಶೇಂಗಾ ಹೋಳಿಗೆ ನೀಡಿದರು. ನಮ್ಮ ಯೋಜನೆ ಬಗ್ಗೆ ಯಾರು ಎಷ್ಟೇ ಟೀಕೆ ಮಾಡಿದರೂ ಅವುಗಳು ಕಾಲಕ್ರಮೇಣ ಸತ್ತು ಹೋಗುತ್ತವೆ. ನಮ್ಮ ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ.‌ ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿರುವ ಕಾರಣಕ್ಕೆ ನಮಗೆ ಹೆಚ್ಚು ಸಂತೋಷವಾಗಿದೆ. ಇದೆಲ್ಲವನ್ನು ಜಾರಿ ಮಾಡಲು ಜನ ನೀಡುರುವ ಶಕ್ತಿಯಿಂದ ನಮಗೆ ಬಲಬಂದಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!