ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಅವರ ಆಕ್ಷೇಪಾರ್ಹ ವ್ಯಂಗ್ಯಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಆರೋಪದ ಮೇಲೆ ಕ್ರಿಮಿನಲ್ ಆರೋಪ ಎದುರಿಸುತ್ತಿರುವ ವ್ಯಂಗ್ಯಚಿತ್ರಕಾರ ಹೇಮಂತ್ ಮಾಳವೀಯ ಅವರಿಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್ ಇಂದು ನಿರಾಕರಿಸಿದೆ.
ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಹೇಮಂತ್ ಮಾಳವೀಯ ಎಂಬ ಕಾರ್ಟೂನಿಸ್ಟ್ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸಂದೀಪ್ ಮೆಹ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು’ ಅವರಲ್ಲಿ ಇನ್ನೂ ಪ್ರಬುದ್ಧತೆ ಇಲ್ಲ. ಇದು ನಿಜಕ್ಕೂ ಉದ್ರಿಕ್ತವಾಗಿದೆ. ವಾಕ್ ಸ್ವಾತಂತ್ರ್ಯವನ್ನು ಈ ವ್ಯಂಗ್ಯಚಿತ್ರಕಾರರು, ಸ್ಟ್ಯಾಂಡ್-ಅಪ್ ಹಾಸ್ಯನಟರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ’ ಎಂದು ಟೀಕಿಸಿದ್ದಾರೆ.
ಜುಲೈ 15ರಂದು ಹೆಚ್ಚಿನ ವಿಚಾರಣೆಗೆ ಈ ಪ್ರಕರಣವನ್ನು ಮುಂದೂಡಿತು. ಇದಕ್ಕೂ ಮೊದಲು ಜುಲೈ 3ರಂದು ಮಧ್ಯಪ್ರದೇಶದ ಹೈಕೋರ್ಟ್ ಹೇಮಂತ್ ಮಾಳವೀಯ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.