ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಡಾಖ್‌ಗೆ ಹೊಸ ಲೆಫ್ಟಿನೆಂಟ್ ಗವರ್ನರ್, ಹರಿಯಾಣ ಮತ್ತು ಗೋವಾ ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ.
ಇದೇ ವೇಳೆ ಲಡಾಖ್ ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ನಿವೃತ್ತ ಬ್ರಿಗೇಡಿಯರ್ ಬಿ.ಡಿ.ಮಿಶ್ರಾ ಅವರು ನೀಡಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ.
ಹರಿಯಾಣದ ನೂತನ ರಾಜ್ಯಪಾಲರಾಗಿ ಪ್ರೊ.ಅಶೀಮ್ ಕುಮಾರ್ ಘೋಷ್ (Ashim Kumar Ghosh) ಹಾಗೂ ಗೋವಾ ರಾಜ್ಯಪಾಲರಾಗಿ ಪಶುಪತಿ ಅಶೋಕ್ ಗಜಪತಿ ರಾಜು (Pusapati Ashok Gajapathi Raju) ಅವರನ್ನು ರಾಷ್ಟ್ರಪತಿಗಳು ನೇಮಕ ಮಾಡಿದ್ದಾರೆ. ಲಡಾಖ್ ಲೆಫ್ಟಿನೆಂಟ್ ಗವರ್ನರ್ ಆಗಿ ಕವಿಂದರ್ ಗುಪ್ತಾ (Kavinder Gupta) ಅವರನ್ನು ನೇಮಕ ಮಾಡಲಾಗಿದೆ .