HODಯಿಂದ ಲೈಂಗಿಕ ಕಿರುಕುಳ: ಮನನೊಂದು ಬೆಂಕಿ ಹಚ್ಚಿಕೊಂಡಿದ್ದ ವಿದ್ಯಾರ್ಥಿನಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲೈಂಗಿಕ ಕಿರುಕುಳ ತಾಳಲಾರದೆ ಕಾಲೇಜಿನಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕಾಲೇಜಿನಲ್ಲಿ ಪ್ರಾಧ್ಯಾಪಕರು ದೀರ್ಘಕಾಲದಿಂದ ಆಕೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಇದರಿಂದ ಬೇಸರಗೊಂಡಿದ್ದ ಆಕೆ ಕಾಲೇಜಿನಲ್ಲೇ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರು. ಬೆಂಕಿ ಹಚ್ಚಿಕೊಂಡಿದ್ದರು.

ಬಾಲಸೋರ್​ನ ಫಕೀರ್ ಮೋಹನ್ ಸ್ವಾಯತ್ತ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು.ವಿಭಾಗದ ಮುಖ್ಯಸ್ಥರು ಆಕೆಗೆ ನಿರಂತರ ಲೈಂಗಿಕ ಶೋಷಣೆ ಮಾಡುತ್ತಿದ್ದರು. ಕಾಲೇಜು ಪ್ರಾಂಶುಪಾಲರ ಬಳಿ ಹಲವು ಬಾರಿ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ, ಕಾಲೇಜು ಆಡಳಿತಕ್ಕೂ ದೂರು ನೀಡಿದ್ದರು. ಯಾವುದೇ ಕ್ರಮ ಕೈಗೊಳ್ಳದ ಕಾರಣ ಬೇಸರದಿಂದ ಆಕೆ ಕಾಲೇಜು ಆವರಣದಲ್ಲಿಯೇ ಬೆಂಕಿ ಹಚ್ಚಿಕೊಂಡಿದ್ದಳು.

ದೇಹವು ಶೇ.90ರಷ್ಟು ಸುಟ್ಟು ಹೋಗಿದ್ದು, ಜೀವನ್ಮರಣ ಹೋರಾಟ ನಡೆಸುತ್ತಿದ್ದರು. ಬಾಲಸೋರ್ ಜಿಲ್ಲಾ ಆಸ್ಪತ್ರೆಯಿಂದ ಜುಲೈ 12ರಂದು ವಿದ್ಯಾರ್ಥಿಯನ್ನು ಭುವನೇಶ್ವರದ ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು.ವೆಂಟಿಲೇಟರ್​​ನಲ್ಲಿ ಇರಿಸಲಾಗಿತ್ತು. ವೈದ್ಯರು ಎಲ್ಲಾ ರೀತಿಯಲ್ಲೂ ಪ್ರಯತ್ನಿಸಿದ್ದರು. ಜುಲೈ 14ರ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!