ವಿಶ್ವದ ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ಅಪಘಾತದಲ್ಲಿ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮನೆಯ ಬಳಿ ವಾಕಿಂಗ್‌ ಮಾಡುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಹಿರಿಯ ಮ್ಯಾರಥಾನ್‌ ಓಟಗಾರ ಫೌಜಾ ಸಿಂಗ್‌ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.

ಸಂಜೆ ಜಲಂಧರ್​​ನಲ್ಲಿರುವ ತಮ್ಮ ಮನೆಯ ಹೊರಗೆ ವಾಕಿಂಗ್ ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಫೌಜಾ ಸಿಂಗ್ 2000ನೇ ಇಸವಿಯಲ್ಲಿ ತಮ್ಮ ಮ್ಯಾರಥಾನ್ ಪ್ರಯಾಣವನ್ನು ಆರಂಭಿಸಿದ್ದರು. ಅಂತಿಮವಾಗಿ ಎಂಟು ರೇಸ್​​ಗಳಲ್ಲಿ ಅವರು ಭಾಗವಹಿಸಿದ್ದರು. 2011ರಲ್ಲಿ ಅವರು ಟೊರಂಟೊ ಮ್ಯಾರಥಾನ್​ನಲ್ಲಿ ಭಾಗವಹಿಸುವ ಮೂಲಕ ಪ್ರಪಂಚದಾದ್ಯಂತ ಸುದ್ದಿಯಾದರು. ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ಎಂದು ಗುರುತಿಸಲ್ಪಟ್ಟರು. ಆದರೆ ಜನನ ಪ್ರಮಾಣಪತ್ರ ಇಲ್ಲದ ಕಾರಣ ಗಿನ್ನೆಸ್ ಬುಕ್ ಆಫ್ ವರ್ಲ್ಡ್​ ರೆಕಾರ್ಡ್ಸ್​ನಲ್ಲಿ ಅಧಿಕೃತವಾಗಿ ನೋಂದಾಯಿಸಲು ಸಾಧ್ಯವಾಗಲಿಲ್ಲ.

2012ರಲ್ಲಿ ಅವರು ಲಂಡನ್ ಮ್ಯಾರಥಾನ್ ಸಮಯದಲ್ಲಿ 20 ಕಿ.ಮೀ ಪೂರ್ಣಗೊಳಿಸುವ ಮೂಲಕ ಮತ್ತೊಮ್ಮೆ ಜಗತ್ತನ್ನು ಬೆರಗುಗೊಳಿಸಿದ್ದರು. ಅವರ ಕೊನೆಯ ವೃತ್ತಿಪರ ಓಟವು 2013ರಲ್ಲಿ 101ನೇ ವಯಸ್ಸಿನಲ್ಲಿ ಹಾಂಗ್ ಕಾಂಗ್ ಮ್ಯಾರಥಾನ್ ಓಟದಲ್ಲಿ ಪಾಲ್ಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!