WEATHER | ಕರ್ನಾಟಕದ 14 ಜಿಲ್ಲೆಗಳಲ್ಲಿ ಮುಂದಿನ 48ಗಂಟೆಗಳಲ್ಲಿ ಭಾರಿ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕರ್ನಾಟಕದ 14 ಜಿಲ್ಲೆಗಳಲ್ಲಿ ಜುಲೈ 22ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಹಾವೇರಿ, ಗದಗ, ಧಾರವಾಡ, ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!