February 6, 2026
Friday, February 6, 2026
spot_img

ಅಂಡರ್-19 ವಿಶ್ವಕಪ್ ಫೈನಲ್‌ ನಲ್ಲಿ ವೈಭವ್ ಭರ್ಜರಿ ಬ್ಯಾಟಿಂಗ್: ಇಂಗ್ಲೆಂಡ್ ಗೆ 412 ರನ್ ಗಳ ಬಿಗ್ ಟಾರ್ಗೆಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಂಡರ್-19 ವಿಶ್ವಕಪ್ 2026ರ ಫೈನಲ್ ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್ ನಡೆಸಿದ್ದು, ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 411 ರನ್ ಪೇರಿಸಿದೆ. ಈ ಮೂಲಕ ಗೆಲುವಿಗೆ ಬಿಗ್ ಟಾರ್ಗೆಟ್ ನೀಡಿದೆ.

ಹರಾರೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಕೇವಲ 80 ಎಸೆತಗಳಲ್ಲಿ 175 ರನ್‌ಗಳ ಅಬ್ಬರದ ಇನ್ನಿಂಗ್ಸ್ ಆಡಿದರು. 15 ಬೌಂಡರಿಗಳು ಮತ್ತು 15 ಸಿಕ್ಸರ್‌ಗಳನ್ನು ಬಾರಿಸಿದರು, 218.75 ರ ಸ್ಟೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ ವೈಭವ್ ಅಂಡರ್-19 ವಿಶ್ವಕಪ್‌ನ ಫೈನಲ್‌ನಲ್ಲಿ ಅತಿ ದೊಡ್ಡ ಇನ್ನಿಂಗ್ಸ್ ಆಡಿದ ದಾಖಲೆಯನ್ನು ಬರೆದರು.

ಭಾರತ ಪರ ನಾಯಕ ಆಯುಷ್ ಮ್ಹಾತ್ರೆ ಕೂಡ 53 ರನ್ ಗಳಿಸಿದರು. ಅಭಿಗ್ಯಾನ್ ಕುಂಡು 40, ಕನಿಷ್ಕ್ ಚೌಹಾಣ್ ಅಜೇಯ 37 ಮತ್ತು ವೇದಾಂತ್ ತ್ರಿವೇದಿ 32 ರನ್ ಗಳಿಸಿದರು. ಈ ಮೂಲಕ ಭಾರತ ಇಂಗ್ಲೆಂಡ್ ತಂಡಕ್ಕೆ 412 ರನ್ ಗಳ ರನ್ ಗುರಿ ನೀಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !