ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡಿ: ಪ್ರಧಾನಿಗೆ ಪತ್ರ ಬರೆದ ರಾಹುಲ್ ​- ಖರ್ಗೆ

ಹೊಸ ದಿಗಂತ ಡಿಜಿಟಿಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ಸಂಸದ ರಾಹುಲ್ ಗಾಂಧಿ ಹಾಗೂ ​ ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಜಂಟಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡುವಂತೆ ಸರ್ಕಾರಕ್ಕೆ ನಾವು ಒತ್ತಾಯಿಸುತ್ತಿದ್ದೇವೆ ಎಂದಿರುವ ರಾಹುಲ್​ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಅನೇಕ ಬಾರಿ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡುವ ಕುರಿತು ಉಚ್ಚರಿಸಿರುವ ಕುರಿತು ಉಲ್ಲೇಖಿಸಿದ್ದಾರೆ.

ಕಳೆದ ಐದ ವರ್ಷದಿಂದ ಜಮ್ಮು ಮತ್ತು ಕಾಶ್ಮೀರದ ಜನರು ನಿರಂತರವಾಗಿ ಸಂಪೂರ್ಣ ರಾಜ್ಯ ಸ್ಥಾನಮಾನಕ್ಕೆ ಒತ್ತಾಯಿಸುತ್ತಿದೆ. ಈ ಬೇಡಿಕೆಯು ನ್ಯಾಯ ಸಮ್ಮತವಾಗಿದ್ದು, ಸಂವಿಧಾನಿಕ ಮತ್ತು ಪ್ರಜಾಪ್ರಭುತ್ವದ ಹಕ್ಕುಗಳಲ್ಲಿ ನೆಲೆಯಾಗಿದೆ. ಇದೇ ಮೊದಲ ಬಾರಿಗೆ ಪೂರ್ಣಾಡಳಿತ ರಾಜ್ಯವೊಂದನ್ನು ಕೇಂದ್ರಾಡಳಿತ ಪ್ರದೇಶವಾಗಿ ಕೆಳಗಿಳಿಸಲಾಗಿದೆ ಎಂದು ರಾಹುಲ್​ ಗಾಂಧಿ ಹೇಳಿದ್ದಾರೆ. ಪ್ರಧಾನಿ ಮೋದಿ, ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡುವ ಕುರಿತು 2024ರ ಮೇ 19 ರಂದು ಭುವನೇಶ್ವರದಲ್ಲಿ ನಡೆದ ಸಂದರ್ಶನದಲ್ಲಿ ಹಾಗೂ 2024ರ ಸೆಪ್ಟೆಂಬರ್ 19ರಂದು ಶ್ರೀನಗರದಲ್ಲಿ ನಡೆದ ಸಮಾವೇಶದಲ್ಲಿ ಸೇರಿದಂತೆ ರಾಜ್ಯ ಸ್ಥಾನಮಾನವನ್ನು ಪುನಃ ಸ್ಥಾಪಿಸುವ ಕುರಿತು ಹೇಳಿರುವುದನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!