February 6, 2026
Friday, February 6, 2026
spot_img

ವೈಭವ್‌ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್ ಗೆ ಹಲವು ದಾಖಲೆಗಳು ಉಡೀಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಂಡರ್ 19 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತದ ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್ ಮೂಲಕ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ.

ಆರಂಭಿಕರಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ ಇಂಗ್ಲೆಂಡ್ ವಿರುದ್ಧ 80 ಎಸೆತಗಳಲ್ಲಿ 175 ರನ್ ಸಿಡಿಸಿ ದಾಖಲೆ ಬರೆದರು. ಅತಿ ಹೆಚ್ಚು ಸಿಕ್ಸರ್‌ಗಳು, ಟೂರ್ನಿಯ ಗರಿಷ್ಠ ರನ್ ಸೇರಿದಂತೆ ಹಲವು ವಿಶ್ವ ದಾಖಲೆಗಳನ್ನು ನಿರ್ಮಿಸಿದರು.

ಈ ಇನ್ನಿಂಗ್ಸ್‌ನಲ್ಲಿ, ಅವರು 15 ಬೌಂಡರಿಗಳು ಮತ್ತು 15 ಸಿಕ್ಸರ್‌ಗಳನ್ನು ಬಾರಿಸಿದರು, 218.75 ರ ಸ್ಟೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ ವೈಭವ್ ಅಂಡರ್-19 ವಿಶ್ವಕಪ್‌ನ ಫೈನಲ್‌ನಲ್ಲಿ ಅತಿ ದೊಡ್ಡ ಇನ್ನಿಂಗ್ಸ್ ಆಡಿದ ದಾಖಲೆಯನ್ನು ಬರೆದರು.

ಇನ್ನು ಅಂಡರ್-19 ವಿಶ್ವಕಪ್ ಫೈನಲ್ ಇತಿಹಾಸದಲ್ಲಿ ವೈಭವ್ 55 ಎಸೆತಗಳಲ್ಲಿ ಶತಕ ಸಿಡಿಸಿವೇಗದ ಶತಕ ಬಾರಿಸಿದ ದಾಖಲೆಯನ್ನು ನಿರ್ಮಿಸಿದರು.

ಈ ವಿಶ್ವಕಪ್​ನಲ್ಲಿ 7 ಪಂದ್ಯಗಳನ್ನಾಡಿದ ವೈಭವ್ 62.71 ಸರಾಸರಿಯಲ್ಲಿ 439 ರನ್ ಬಾರಿಸಿದರು. ಇದರಲ್ಲಿ 1 ಶತಕ ಮತ್ತು 3 ಅರ್ಧಶತಕಳು ಸೇರಿವೆ.

ವೈಭವ್ ಸೂರ್ಯವಂಶಿ ಅಂಡರ್ 19 ವಿಶ್ವಕಪ್ ಫೈನಲ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹಾಗೆಯೇ 19 ವರ್ಷದೊಳಗಿನವರ ವಿಶ್ವಕಪ್‌ನ ಒಂದು ಆವೃತ್ತಿಯಲ್ಲಿ ಅತಿ ಹೆಚ್ಚು ಸಿಕ್ಸರ್‌ ಬಾರಿಸಿದ ದಾಖಲೆಯೂ ವೈಭವ್ ಪಾಲಾಗಿದೆ. ಇದರೊಂದಿಗೆ ವೈಭವ್ ಅಂಡರ್-19 ಏಕದಿನ ಕ್ರಿಕೆಟ್‌ನಲ್ಲಿ 100 ಸಿಕ್ಸರ್‌ಗಳನ್ನು ಬಾರಿಸಿ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !