ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ಅಮರನಾಥ ಯಾತ್ರೆಗೆ ತೆರಳುವ ಮಾರ್ಗದಲ್ಲಿ ಮಣ್ಣಿನ ಗುಡ್ಡ ಕುಸಿತ ಸಂಭವಿಸಿದ್ದು, ಇದರಿಂದಾಗಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.
ಗಂಡೇರ್ಬಾಲ್ ಜಿಲ್ಲೆಯ ಬಾಲ್ಟಾಲ್ ಯಾತ್ರೆಯ ಬಾಲ್ಟಾಲ್ ಮಾರ್ಗದಲ್ಲಿ ನೀರಿನ ಜೊತೆ ಕಲ್ಲು ಬಂಡೆಗಳು ಉರುಳಿ ಬಂದಿದ್ದರಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಇತರ ಮೂವರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
ಬಾಲ್ಟಾಲ್ ಮಾರ್ಗದಲ್ಲಿ ಮಣ್ಣಿನ ಕುಸಿತವಾಗಿದ್ದು, ಈ ವೇಳೆ ಭಯಭೀತರಾದ ಜನರು ಅಪಾಯದಿಂದ ತಪ್ಪಿಸಿಕೊಂಡಿದ್ದಾರೆ.