ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ 5 ಪಾಲಿಕೆ ಮಾಡುವುದಕ್ಕೆ ಇಂದು ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯ ನಿರ್ಧಾರಗಳನ್ನು ಮಾಧ್ಯಮಗಳಿಗೆ ತಿಳಿಸಿದಂತ ಸಚಿವ ಹೆಚ್.ಕೆ ಪಾಟೀಲ್ ಅವರು, ಕ್ರಿಮಿನಲ್ ಕಾನೂನು ತಿದ್ದುಪಡಿ ಅಧ್ಯಾದೇಶ ವಿಧೇಯಕ 2022 ವಾಪಾಸ್ ಪಡೆಯಲು ನಿರ್ಧರಿಸಿರುವುದಾಗಿ ತಿಳಿಸಿದರು.
ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಐದು ಪಾಲಿಕೆ ಮಾಡುವುದಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ. ಬಿಬಿಎಂಪಿಯನ್ನು ಐದು ವಿಭಾಗ ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.