ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಳೆ ಪ್ರಧಾನಿ ಮೋದಿ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಮೋದಿ ಬಿಹಾರದಿಂದ ಬಂಗಾಳದ ದುರ್ಗಾಪುರಕ್ಕೆ ಆಗಮಿಸಲಿದ್ದಾರೆ. ಮೊದಲು ಅವರು ವಿವಿಧ ಯೋಜನೆಗಳನ್ನು ಉದ್ಘಾಟಿಸುವ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಅವರು ಪಕ್ಷದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ” ಎಂದು ರಾಜ್ಯ ಬಿಜೆಪಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.
ಈ ತಿಂಗಳ ಆರಂಭದಲ್ಲಿ ಬಂಗಾಳಕ್ಕೆ ಹೊಸ ಬಿಜೆಪಿ ರಾಜ್ಯ ಅಧ್ಯಕ್ಷರಾಗಿ ಸಮಿಕ್ ಭಟ್ಟಾಚಾರ್ಯ ಅವರನ್ನು ನೇಮಿಸಿದ ನಂತರ ಪ್ರಧಾನಿ ಮೋದಿ ಪಶ್ಚಿಮ ಬಂಗಾಳಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ.
ಜುಲೈ 21ರಂದು ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಹುತಾತ್ಮರ ದಿನಾಚರಣೆಯ ರ್ಯಾಲಿ ಹಮ್ಮಿಕೊಂಡಿದೆ. ಈ ವೇದಿಕೆಯನ್ನು ಮಮತಾ ಬ್ಯಾನರ್ಜಿ ತಮ್ಮ ಪ್ರಮುಖ ರಾಜಕೀಯ ಪ್ರತಿಸ್ಪರ್ಧಿ ಬಿಜೆಪಿಗೆ ಸ್ಪಷ್ಟ ರಾಜಕೀಯ ಸಂದೇಶವನ್ನು ನೀಡಲು ಬಳಸುವ ಸಾಧ್ಯತೆಯಿದೆ.