ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಷಾಢ ಮಾಸದ ನಾಲ್ಕನೇ ಶುಕ್ರವಾರದ ಹಿನ್ನೆಲೆ ನಾಡದೇವಿ ಚಾಮುಂಡಿಗೆ ಸಿಂಹವಾಹಿನಿ ಅಲಂಕಾರ ಮಾಡಲಾಗಿದೆ.
ಉತ್ಸವ ಮೂರ್ತಿಗೆ ವಿವಿಧ ಬಗೆಯ ಹೂ ಹಾಗೂ ನವಿಲಿನಗರಿ ಹಾರದ ಅಲಂಕಾರ ಮಾಡಲಾಗಿದೆ. ದೇವಾಲಯದ ಆವರಣಕ್ಕೆ ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಲಾಗಿದೆ. ಮುಂಜಾನೆ 4:30ರಿಂದ ತಾಯಿಗೆ ವಿಶೇಷ ಪೂಜೆ ನೆರವೇರುತ್ತಿದೆ.
ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ಭಕ್ತರು ತಾಯಿಯ ದರ್ಶನ ಪಡೆಯುತ್ತಿದ್ದಾರೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದರಿಂದ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳನ್ನು ನಿಷೇಧಿಸಲಾಗಿದೆ.