ಹೊಸದಿಗಂತ ಡಿಜಿಟಲ್ ಡೆಸ್ಕ್:
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಎಸ್ಮಾ ಜಾರಿ ಮೂಲಕ ರಾಜ್ಯ ಸರ್ಕಾರ ಶಾಕ್ ನೀಡಿದೆ.
ಕೆಎಸ್ಆರ್ಟಿಸಿ ಸಾರಿಗೆ ನೌಕರರು ಪ್ರತಿಭಟನೆ ನಡೆಸದಂತೆ ಎಸ್ಮಾ ಜಾರಿ ಮಾಡಲಾಗಿದ್ದು, ಮುಂದಿನ ಆರು ತಿಂಗಳು ಎಸ್ಮಾ ಜಾರಿಯಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಮುಷ್ಕರವನ್ನು ನಿಷೇಧಿಸಲಾಗಿದೆ.
ಸಾರಿಗೆ ನೌಕರರಿಗೆ 38 ತಿಂಗಳಿನಿಂದ ಭತ್ಯೆ ಮತ್ತು ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್ 5ರಂದು ಬೆಳಗ್ಗೆ 6 ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಇದರಂತೆ ರಾಜ್ಯದ ಕೆಎಸ್ಆರ್ಟಿಸಿ,, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ಮುಷ್ಕರಕ್ಕೆ ಮುಂದಾಗಿದ್ದರು.
ಎಸ್ಮಾ ಎಂದರೇನು?
ಅಗತ್ಯ ಸೇವೆ ನಿರ್ವಹಣೆ ಕಾಯ್ದೆ ಎಂದರ್ಥ (Essential Services Maintenance Act) ಸರ್ಕಾರಿ ನೌಕರನನ್ನು ನಿಯಂತ್ರಣ ಮಾಡುವ ಕಾಯ್ದೆ 1968 ರಿಂದ ಜಾಲ್ತಿಯಲ್ಲಿದ್ದು, ಕರ್ನಾಟಕದಲ್ಲಿ ಎಸ್ಮಾ ಕುರಿತು 1994ರಲ್ಲಿ ಕಾನೂನಿನ ಮೊದಲ ರೂಪುರೇಷೆ ತಯಾರಾಯಿತು. 2013ರ ಜೂನ್ ನಿಂದ ರಾಜ್ಯದಲ್ಲಿ ಕಾನೂನಾಗಿ ಮಾರ್ಪಾಡಾಯಿತು. ನಂತರ 2015 ರಲ್ಲಿ ಸರ್ಕಾರ ಕೆಲ ತಿದ್ದುಪಡಿ ಮಾಡಿದೆ.