ಟಿಆರ್​ಎಫ್ ಜಾಗತಿಕ ಭಯೋತ್ಪಾದಕ ಸಂಘಟನೆ: ಅಮೆರಿಕ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಮೆರಿಕ ಸರ್ಕಾರವು ರೆಸಿಸ್ಟೆಂನ್ಸ್​ ಫ್ರಂಟ್(ಟಿಆರ್​ಎಫ್​) ಅನ್ನು ಜಾಗತಿಕ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ.

ಏಪ್ರಿಲ್ 22 ರಂದು ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕರು 26 ಪ್ರವಾಸಿಗರನ್ನು ಗುಂಡಿಕ್ಕಿ ಕೊಂದಿದ್ದರು. ಈ ಭಯೋತ್ಪಾದಕ ದಾಳಿಯ ಜವಾಬ್ದಾರಿಯನ್ನು ಟಿಆರ್‌ಎಫ್ ಹೊತ್ತುಕೊಂಡಿತ್ತು. ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಅಡಿಯಲ್ಲಿ ಈ ಸಂಘಟನೆ ಕಾರ್ಯ ನಿರ್ವಹಿಸುತ್ತಿದೆ.

ಟಿಆರ್‌ಎಫ್ ಅನ್ನು ವಿದೇಶಿ ಭಯೋತ್ಪಾದನಾ ಸಂಘಟನೆ ಎಂದು ಅಮೆರಿಕ ಹೆಸರಿಸುವುದರಿಂದ ಅದರ ಸದಸ್ಯರ ಮೇಲೆ ಕಠಿಣ ಆರ್ಥಿಕ ಮತ್ತು ಪ್ರಯಾಣ ನಿರ್ಬಂಧಗಳನ್ನು ವಿಧಿಸುತ್ತದೆ. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಅಮೆರಿಕ ಭಾರತದ ಜೊತೆ ನಿಲ್ಲುತ್ತದೆ ಮತ್ತು ಭಾರತಕ್ಕೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಹೇಳಿದರು.

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಕಾರಣವಾದ ಟಿಆರ್‌ಎಫ್ ಅನ್ನು ಜಾಗತಿಕ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ್ದಕ್ಕಾಗಿ ಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಅಮೆರಿಕವನ್ನು ಶ್ಲಾಘಿಸಿದ್ದಾರೆ.

ಈ ಕ್ರಮವು ಅಮೆರಿಕದ ರಾಷ್ಟ್ರೀಯ ಭದ್ರತೆ, ಭಯೋತ್ಪಾದನೆ ವಿರುದ್ಧದ ಹೋರಾಟ ಮತ್ತು ಭಾರತದೊಂದಿಗಿನ ಸಹಕಾರಕ್ಕೆ ಪುರಾವೆಯಾಗಿದೆ ಎಂದು ಅವರು ಹೇಳಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!