February 6, 2026
Friday, February 6, 2026
spot_img

ಕಾಂಗ್ರೆಸ್ ಪಕ್ಷದಿಂದ ಗೇಟ್ ಪಾಸ್: ರಾಹುಲ್ ಗಾಂಧಿ ‘ಪಪ್ಪು’ ಎಂದ ನವಜೋತ್ ಕೌರ್ ಸಿಧು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಕ್ರಿಕೆಟಿಗ, ಮಾಜಿ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರ ಪತ್ನಿ ಮಾಜಿ ಶಾಸಕಿ ನವಜೋತ್ ಕೌರ್ ಸಿಧು ಅವರನ್ನು ಕಾಂಗ್ರೆಸ್‌ನಿಂದ ಉಚ್ಚಾಟನೆ ಮಾಡಲಾಗಿದೆ.

ಇದರಿಂದ ಅಕ್ರೋಷಗೊದ ಅವರು, ಸಾಮಾಜಿಕ ಮಾಧ್ಯಮ ಪೋಸ್ಟ್‌ ಮಾಡಿದ್ದು , ರಾಹುಲ್ ಗಾಂಧಿ ಅವರನ್ನು “ಪಪ್ಪು” ಎಂದು ಕರೆದಿದ್ದಾರೆ.

ಕಾಂಗ್ರೆಸ್‌ನ ಪಂಜಾಬ್ ವ್ಯವಹಾರಗಳ ಉಸ್ತುವಾರಿ ಮತ್ತು ಛತ್ತೀಸ್‌ಗಢ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರು, ಶನಿವಾರ ಪಕ್ಷದ ಶಿಸ್ತು ಉಲ್ಲಂಘಿಸಿದ ಆರೋಪದ ಮೇಲೆ ಕೌರ್ ಅವರನ್ನು ಉಚ್ಚಾಟನೆ ಮಾಡಿದ್ದಾರೆ.

ಇದೀಗ ತಮ್ಮ ಉಚ್ಚಾಟನೆಗೆ ಪ್ರತಿಕ್ರಿಯಿಸಿದ ಕೌರ್, ರಾಹುಲ್ ಗಾಂಧಿಯವರ ನಾಯಕತ್ವವನ್ನು ಟೀಕಿಸಿದ್ದು, ಅವರು ನೆಲದ ವಾಸ್ತವಗಳಿಂದ ಸಂಪರ್ಕ ಕಡಿತಗೊಂಡಿದ್ದಾರೆ ಎಂದು ಎಕ್ಸ್‌ನಲ್ಲಿ ಸುದೀರ್ಘ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ.

ರಾಹುಲ್ ಗಾಂಧಿಯವರ ಆಂತರಿಕ ವಲಯವು ಪ್ರತ್ಯೇಕವಾಗಿ ಗುರುತಿಸಿಕೊಂಡು ಸವಲತ್ತುಗಳನ್ನು ಅನುಭವಿಸುತ್ತಿದೆ.ನಿಮ್ಮ ಅನೇಕ ಬೆಂಬಲಿಗರು ನಿಸ್ವಾರ್ಥ ಸೇವೆ ಸಲ್ಲಿಸಲು ಸಿದ್ಧರಿಲ್ಲ; ಬದಲಾಗಿ, ಅವರು ತಮ್ಮ ಜೇಬುಗಳನ್ನು ತುಂಬಿಸಿಕೊಳ್ಳುವಲ್ಲಿ ನಿರತರಾಗಿದ್ದಾರೆ. ಏಕೆಂದರೆ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂದು ಅವರಿಗೆ ಗೊತ್ತು. ನಿಮಗೆ ಧೈರ್ಯವಿದ್ದರೆ, ಪ್ರಸ್ತುತ ಸರ್ಕಾರದ ವಿರುದ್ಧ ಮಾತನಾಡಲು ಹೇಳಿ ಎಂದು ಕೌರ್ X ನಲ್ಲಿ ಬರೆದಿದ್ದಾರೆ.

ಇದರ ನಡುವೆ ನವಜೋತ್ ಸಿಂಗ್ ಸಿಧು ಹಾಗೂ ನವಜೋತ್ ಕೌರ್ ಸಿಧು ಬಿಜೆಪಿಗೆ ಸೇರಲಿದ್ದಾರೆ ಎಂಬ ಊಹಾಪೋಹಗಳಿವೆ. ಆದರೆ, ಈ ಬಗ್ಗೆ ನವಜೋತ್ ಸಿಂಗ್ ಸಿಧು ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !