ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಇಸ್ಲಾಮ್‌ಪುರವನ್ನು ಈಶ್ವರಪುರ ಎಂದು ಮರುನಾಮಕರಣಕ್ಕೆ ‘ಮಹಾ’ ಸರ್ಕಾರ ನಿರ್ಧರಿಸಿದೆ.
ಮಳೆಗಾಲ ಅಧಿವೇಶನ ಸಂಬಂಧ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಸದ್ಯ ರಾಜ್ಯ ಸರ್ಕಾರ ತೆಗೆದುಕೊಂಡ ಈ ನಿರ್ಧಾರದ ಅನುಮೋದನೆಗಾಗಿ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದರು.
ಸಂಭಾಜಿ ಭಿಡೆ ನೇತೃತ್ವದ ಹಿಂದುತ್ವ ಸಂಘಟನೆಯಾದ ಶಿವ ಪ್ರತಿಷ್ಠಾನವು ಇಸ್ಲಾಂಪುರದ ಹೆಸರನ್ನು ಬದಲಾಯಿಸಬೇಕೆಂದು ಒತ್ತಾಯಿಸಿ ಸಾಂಗ್ಲಿ ಜಿಲ್ಲಾಧಿಕಾರಿಗೆ ಜ್ಞಾಪಕ ಪತ್ರವೊಂದನ್ನು ಕಳುಹಿಸಿದ್ದರು.