ಹೊಸದಿಗಂತ ಡಿಜಿಟಲ್ ಡೆಸ್ಕ್:
2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತ ಎಂಬ ತಮ್ಮ ಸರ್ಕಾರದ ದೃಷ್ಟಿಕೋನವನ್ನು ಪುನರುಚ್ಚರಿಸುತ್ತಾ, ಪ್ರಧಾನಿ ನರೇಂದ್ರ ಮೋದಿ ಅವರು ದುರ್ಗಾಪುರದಲ್ಲಿ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿ, ಪಶ್ಚಿಮ ಬಂಗಾಳದ ಜನರನ್ನು ಅಭಿನಂದಿಸಿದರು.
ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, “ಇಂದು, ದುರ್ಗಾಪುರ ಮತ್ತು ರಘುನಾಥಪುರದಲ್ಲಿನ ಕಾರ್ಖಾನೆಗಳು ಹೊಸ ತಂತ್ರಜ್ಞಾನದಿಂದ ಸಜ್ಜುಗೊಳ್ಳುತ್ತಿವೆ. ಇವುಗಳಲ್ಲಿ 1500 ಕೋಟಿ ರೂ. ಹೂಡಿಕೆ ಮಾಡಲಾಗಿದೆ… ಈ ಯೋಜನೆಗಳು ಪೂರ್ಣಗೊಂಡಿದ್ದಕ್ಕಾಗಿ ನಾನು ಪಶ್ಚಿಮ ಬಂಗಾಳದ ಜನರನ್ನು ಅಭಿನಂದಿಸುತ್ತೇನೆ…. ನಾವು ‘2047ರ ವೇಳೆಗೆ ವಿಕ್ಷಿತ ಭಾರತ’ ಮಾಡುವ ಸಂಕಲ್ಪದೊಂದಿಗೆ ಕೆಲಸ ಮಾಡುತ್ತಿದ್ದೇವೆ… 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ಭಾರತವನ್ನಾಗಿ ಮಾಡುವ ಗುರಿ ಹೊಂದಿದ್ದೇವೆ.” ಎಂದರು.
ಈ ಗುರಿಯನ್ನು ಸಾಧಿಸಲು ಸರ್ಕಾರದ ಕಾರ್ಯತಂತ್ರವನ್ನು ಒತ್ತಿ ಹೇಳಿದ ಪ್ರಧಾನಿ, “ನಮ್ಮ ಮಾರ್ಗವೆಂದರೆ ಅಭಿವೃದ್ಧಿಯ ಮೂಲಕ ಸಬಲೀಕರಣ, ಉದ್ಯೋಗದ ಮೂಲಕ ಸ್ವಾವಲಂಬನೆ, ಸೂಕ್ಷ್ಮತೆಯ ಮೂಲಕ ಉತ್ತಮ ಆಡಳಿತ” ಎಂದು ಪ್ರತಿಪಾದಿಸಿದರು.