ಮಾಜಿ ಸಂಸದ ಅನಂತ ಕುಮಾರ್ ಹೆಗಡೆಗೆ ಜೀವ ಬೆದರಿಕೆ ಸಂದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಕನ್ನಡ ಜಿಲ್ಲೆ ಮಾಜಿ ಸಂಸದ ಅನಂತ ಕುಮಾರ್ ಹೆಗಡೆಗೆ ಅಪರಿಚಿತ ವ್ಯಕ್ತಿಯೊಬ್ಬ ಇ-ಮೇಲ್ ಮೂಲಕ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಈ ಸಂಬಂಧ ಹೆಗಡೆ ಅವರ ಆಪ್ತ ಕಾರ್ಯದರ್ಶಿ ಸುರೇಶ್ ಶೆಟ್ಟಿ ಅವರು ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ದೂರು ದಾಖಲಿಸಿದ್ದಾರೆ.

ಜೂನ್ 24ರಂದು ಅನಂತ ಕುಮಾರ್ ಹೆಗಡೆ ಅವರಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಸಂದೇಶ ಬಂದಿತ್ತು. ನ್ಯಾಯಾಲಯದ ಅನುಮತಿ ಮೇರೆಗೆ ಶುಕ್ರವಾರ (ಜು.18) ದೂರು ದಾಖಲಿಸಲಾಗಿದೆ. ಕೇಸ್ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅನಂತ ಕುಮಾರ್ ಹೆಗಡೆ ಅವರಿಗೆ ಈ ಹಿಂದೆ ಸಹ ಜೀವ ಬೆದರಿಕೆ ಸಂದೇಶ ಬಂದಿತ್ತು.

ಶಿರಸಿ ಮಾರುಕಟ್ಟೆ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಆರಂಭಿಸಿದ್ದಾರೆ. ಪೊಲೀಸರ ಪ್ರಕಾರ, ಇ-ಮೇಲ್‌ನ ಮೂಲ, ಕಳುಹಿಸಿದ ವ್ಯಕ್ತಿಯ ನಂಬುಗೆಯ ಮಾಹಿತಿಯನ್ನು ಗುರುತಿಸಲು ತಾಂತ್ರಿಕ ಸಹಾಯದಿಂದ ತನಿಖೆ ಚುರುಕುಗೊಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!