ಹೊಸದಿಗಂತ ಡಿಜಿಟಲ್ ಡೆಸ್ಕ್:
ಮದ್ಯ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಛತ್ತೀಸ್‌ಗಢ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಪುತ್ರ ಚೈತನ್ಯ ಬಘೇಲ್ ಅವರನ್ನು ರಾಯ್‌ಪುರ ನ್ಯಾಯಾಲಯ 5 ದಿನ ಇಡಿ ಕಸ್ಟಡಿಗೆ ನೀಡಿ ಶುಕ್ರವಾರ ಆದೇಶಿಸಿದೆ.
ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಭೂಪೇಶ್ ಬಘೇಲ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ಬೆನ್ನಲ್ಲೇ ಅವರ ಪುತ್ರ ಚೈತನ್ಯ ಬಘೇಲ್ ಅವರನ್ನು ಬಂಧಿಸಿತ್ತು.
ಇಡಿ ಅಧಿಕಾರಿಗಳು ಚೈತನ್ಯ ಬಘೇಲ್ ಅವರನ್ನು ರಾಯ್‌ಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ಕೋರ್ಟ್, ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಐದು ದಿನ ಇಡಿ ವಶಕ್ಕೆ ನೀಡಿದೆ.