ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಂಗಾಳ ಸರ್ಕಾರ ಆರೋಪಿಗಳಿಗೆ ರಕ್ಷಣೆ ನೀಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿಅವರು ಗುರುವಾರ ವಾಗ್ದಾಳಿ ನಡೆಸಿದ್ದಾರೆ.
ದುರ್ಗಾಪುರದಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕೊಲ್ಕತ್ತಾದಲ್ಲಿ ಕಾನೂನು ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ಉಲ್ಲೇಖಿಸಿ ಟಿಎಂಸಿಯನ್ನು ಟೀಕಿಸಿದ್ದಾರೆ.
ಇಲ್ಲಿ ಯುವ ವೈದ್ಯೆಯ ಮೇಲೆ ದೌರ್ಜನ್ಯ ನಡೆದಾಗ, ಟಿಎಂಸಿ ಸರ್ಕಾರ ಅಪರಾಧಿಗಳನ್ನು ರಕ್ಷಿಸುವಲ್ಲಿ ಹೇಗೆ ತೊಡಗಿಸಿಕೊಂಡಿತು ಎಂಬುದನ್ನು ನೀವೆಲ್ಲರೂ ನೋಡಿದ್ದೀರಿ. ಈಗ ಕಾನೂನು ವಿದ್ಯಾರ್ಥಿನಿ ಮೇಲೆ ದೌರ್ಜನ್ಯ ನಡೆದಿದೆ. ಇಲ್ಲಿಯೂ ಬಂಗಾಳ ಸರ್ಕಾರ ಆರೋಪಿಗಳಿಗೆ ರಕ್ಷಣೆ ನೀಡುತ್ತಿದೆ ಎಂದು ಆರೋಪಿಸಿದ್ದಾರೆ. ಈ ಪ್ರಕರಣದ ಆರೋಪಿಗಳು ಟಿಎಂಸಿ ಜೊತೆಗೆ ನೇರ ಸಂಪರ್ಕ ಹೊಂದಿದ್ದಾರೆ ಎಂದು ಮೋದಿ ಹೇಳಿದ್ದಾರೆ.
ಆಡಳಿತ ಪಕ್ಷದ ಕಾನೂನು ಮತ್ತು ಸುವ್ಯವಸ್ಥೆಯ ದಾಖಲೆಯನ್ನು ಗುರಿಯಾಗಿಸಿಕೊಂಡು ಪ್ರಧಾನಿ, ಟಿಎಂಸಿ ರಾಜ್ಯದಲ್ಲಿ ಸುರಕ್ಷತೆ ಮತ್ತು ನ್ಯಾಯವನ್ನು ಖಚಿತಪಡಿಸಿಕೊಳ್ಳುವಲ್ಲಿ ವಿಫಲವಾಗಿದೆ . ಪಶ್ಚಿಮ ಬಂಗಾಳದಲ್ಲಿ ಮುರ್ಷಿದಾಬಾದ್‌ನಂತಹ ಗಲಭೆಗಳು ನಡೆಯುತ್ತವೆ ಮತ್ತು ಪೊಲೀಸರು ಏಕಪಕ್ಷೀಯ ಕ್ರಮ ಕೈಗೊಳ್ಳುತ್ತಾರೆ. ಪಶ್ಚಿಮ ಬಂಗಾಳದಲ್ಲಿ ನ್ಯಾಯವಿಲ್ಲ. ರಾಜ್ಯ ಸರ್ಕಾರವು ಜನರ ಜೀವಗಳನ್ನು ರಕ್ಷಿಸಲು ಸಾಧ್ಯವಿಲ್ಲ ಎಂದು ಮೋದಿ ಗುಡುಗಿದರು.