ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ: ಮಧ್ಯಸ್ಥಿಕೆ ವಹಿಸುವಂತೆ ಕೇಂದ್ರಕ್ಕೆ ಮನವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ನಮ್ಮ ಮೆಟ್ರೋದ ಹಳದಿ ಮಾರ್ಗದ ಕಾರ್ಯಾರಂಭವನ್ನು ತ್ವರಿತಗೊಳಿಸಲು ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಕ್ಕೆ ಸಂಸದ ತೇಜಸ್ವಿ ಸೂರ್ಯ ಮನವಿ ಮಾಡಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್ ಅವರನ್ನು ತೇಜಸ್ವಿ ಸೂರ್ಯ ಭೇಟಿ ಮಾಡಿದ್ದು, ಈ ವೇಳೆ ಮೆಟ್ರೋ ರೈಲು ಸುರಕ್ಷತಾ ಆಯುಕ್ತರು ಅವರಿಂದ ಶೀಘ್ರವೇ ಹಳದಿ ಮಾರ್ಗಕ್ಕೆ ಅನುಮೋದನೆ ಕೊಡಿಸಬೇಕೆಂದು ಒತ್ತಾಯಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಹೆಚ್ಚಿನ ಸಾರಿಗೆ ಆಧಾರಿತ ಅಭಿವೃದ್ಧಿಗೆ ಆದ್ಯತೆ ನೀಡಬೇಕಿದೆ. ಕಾರುಗಳು, ಇತರ ವೈಯಕ್ತಿಕ ವಾಹನಗಳಿಂದ ಜರನ್ನು ಸಾರ್ವಜನಿಕ ಸಾರಿಗೆ ವರ್ಗಾಯಿಸಬೇಕಿದೆ. ಸಾರ್ವಜನಿಕ ಸಾರಿಗೆಗೆ ಆದ್ಯತೆ ನೀಡಲು ಸಹಕರಿಸುವಂತೆ ಆಗ್ರಹಿಸಿದ್ದಾರೆ.

ಮುಂದಿನ ಒಂದು ದಶಕದಲ್ಲಿ ವಿಶ್ವದ ಅತ್ಯಂತ ವಾಸಯೋಗ್ಯ ನಗರಗಳಲ್ಲಿ ಕನಿಷ್ಠ 5 ಭಾರತೀಯ ನಗರಗಳನ್ನು ಹೊಂದುವ ಗುರಿ ನಮ್ಮದಾಗಬೇಕು ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!