ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದಲ್ಲಿ ಟೋಯಿಂಗ್ ವ್ಯವಸ್ಥೆ ಮರು ಜಾರಿ ಸಂಬಂಧ ತ್ವರಿತವಾಗಿ ಪೊಲೀಸರಿಗೆ ಹೊಸ ವಾಹನಗಳನ್ನು ನೀಡುವುದಾಗಿ ಬಿಬಿಎಂಪಿ ಒಪ್ಪಿದೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಜನರು ಸಂಚಾರ ನಿಯಮ ಪಾಲಿಸುವುದಿಲ್ಲ. ರಸ್ತೆಯ ಎರಡು ಬದಿಯಲ್ಲಿ ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುತ್ತಿದ್ದಾರೆ. ಇದೇ ವಿಚಾರಕ್ಕೆ ದಿನನಿತ್ಯ ಗಲಾಟೆಗಳಾಗುತ್ತಿವೆ. ಈ ಹಿನ್ನೆಲೆಯಲ್ಲಿ ಟೋಯಿಂಗ್ ವ್ಯವಸ್ಥೆ ಮರು ಜಾರಿಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ನಿಲುಗಡೆ ನಿಷೇಧಿತ ಪ್ರದೇಶದಲ್ಲಿ ನಿಲ್ಲುವ ವಾಹನಗಳನ್ನು ತೆರವುಗೊಳಿಸಲಾಗುತ್ತದೆ. ಟೋಯಿಂಗ್ ಅನ್ನು ಪೊಲೀಸರೇ ನಡೆಸಲಿದ್ದಾರೆ. ಈ ಟೋಯಿಂಗ್ ಮಾಡಲು ಮಹಾನಗರ ಪಾಲಿಕೆಯಿಂದ ಹೊಸದಾಗಿ ವಾಹನಗಳನ್ನು ನೀಡುವುದಾಗಿ ಬಿಬಿಎಂಪಿ ಮುಖ್ಯ ಆಯುಕ್ತರು ಒಪ್ಪಿದ್ದಾರೆ ಎಂದು ಹೇಳಿದರು.