ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾದಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿದ್ದು, 15 ವರ್ಷದ ಬಾಲಕಿಯ ದುಷ್ಕರ್ಮಿಗಳ ಗುಂಪೊಂದು ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಬಲಂಗಾ ಪ್ರದೇಶದಲ್ಲಿ ಶನಿವಾರ ನಡೆದಿದೆ.
ಗಂಭೀರವಾಗಿ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಸ್ಥಳೀಯರು ರಕ್ಷಿಸಿದ್ದು, ಆಕೆಯನ್ನು ಭುವನೇಶ್ವರದ ಏಮ್ಸ್’ಗೆ ದಾಖಲಿಸಲಾಗಿದೆ.
ಬಾಲಕಿ ಪುಸ್ತಕ ನೀಡಲು ತನ್ನ ಸ್ನೇಹಿತೆಯ ಮನೆಗೆ ತೆರಳುತ್ತಿದ್ದಾಗ ಕನಿಷ್ಠ ಮೂವರು ಯುವಕರು ಇದ್ದ ಗುಂಪೊಂದು ಇದ್ದಕ್ಕಿದ್ದಂತೆ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆಂದು ತಿಳಿದುಬಂದಿದೆ.
ಬಾಲಕಿಗೆ ಬೆಂಕಿ ಹಚ್ಚಿದ ಬಳಿಕ ಆರೋಪಿಗಳು ಸ್ಥಳದಿಂದ ಕಾಲ್ಕಿತ್ತಿದ್ದು, ಸ್ಥಳೀಯರು ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ಮೊದಲು ಆಕೆಯನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾಲೆ. ನಂತರ ಏಮ್ಸ್’ಗೆ ಸ್ಥಳಾಂತರಿಸಲಾಗಿದೆ ಎಂದು ವರದಿಗಳು ತಿಳಿಸಿವೆ.