ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ವಿಭು ಭಕ್ರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್, ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತರಿದ್ದರು.
ನ್ಯಾ. ಭಕ್ರು ಅವರು 1966ರಲ್ಲಿ ನಾಗಪುರದಲ್ಲಿ ಜನಿಸಿದರು. ದೆಹಲಿಯ ಮಥುರಾ ರಸ್ತೆಯಲ್ಲಿರುವ ದೆಹಲಿ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದು, 1987ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ವಾಣಿಜ್ಯ ವಿಷಯದಲ್ಲಿ ಪದವಿ ಪಡೆದಿದ್ದಾರೆ. 1989ರಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿಯೂ ಅರ್ಹತೆ ಪಡೆದಿದ್ದರು.