ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಶನಿವಾರ ಅಲ್ಲಲ್ಲಿ ಮಳೆಯಾಗಿತ್ತು. ಎಚ್ಎಎಲ್ನಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.