ಸ್ವಲ್ಪ ಸಮಯದಲ್ಲೇ ಫಟಾಫಟ್ ಅಂತ ರೆಡಿ ಆಗ್ಬೇಕು, ಆದರೆ ರುಚಿಯಲ್ಲಿ ಯಾವತ್ತೂ ಕಡಿಮೆ ಇರಬಾರದು ಅಂತಹ ಡಿಶ್ ಬೇಕೆಂದು ನೀವು ಯೋಚಿಸುತ್ತಿದ್ದರೆ, ಎಗ್ ಕೀಮಾ ಬೆಸ್ಟ್. ಕೇವಲ 30 ನಿಮಿಷಗಳಲ್ಲಿ ಈ ಡಿಶ್ ಸಿದ್ಧವಾಗುತ್ತೆ. ಅಡುಗೆಗೆ ಕಡಿಮೆ ಸಮಯ ಇರುವವರಿಗಿದು ಉತ್ತಮ ಆಯ್ಕೆ.
ಬೇಕಾಗುವ ಪದಾರ್ಥಗಳು
ಬೇಯಿಸಿದ ಮೊಟ್ಟೆ – 3
ಹೆಚ್ಚಿದ ಈರುಳ್ಳಿ – 1
ಹೆಚ್ಚಿದ ಟೊಮೆಟೊ – 1
ಶುಂಠಿ ಬೆಳ್ಳುಳ್ಳಿ ಪೇಸ್ಟ್ – 1 ಟೀಸ್ಪೂನ್
ಕೊತ್ತಂಬರಿ ಪುಡಿ – 1 ಟೀಸ್ಪೂನ್
ಗರಂ ಮಸಾಲೆ ಪುಡಿ – ಅರ್ಧ ಟೀಸ್ಪೂನ್
ಉಪ್ಪು – ಅರ್ಧ ಟೀಸ್ಪೂನ್
ಎಣ್ಣೆ – 4 ಟೀಸ್ಪೂನ್
ಜೀರಿಗೆ – ಅರ್ಧ ಟೀಸ್ಪೂನ್
ಕರಿಬೇವಿನ ಸೊಪ್ಪು – ಕೆಲವು
ಕೆಂಪು ಮೆಣಸಿನಪುಡಿ – 1 ಟೀಸ್ಪೂನ್
ಮಾಡುವ ವಿಧಾನ
ಮೊದಲು ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ, ಜೀರಿಗೆ, ಹೆಚ್ಚಿದ ಈರುಳ್ಳಿ, ಹಸಿರು ಮೆಣಸಿನಕಾಯಿ, ಕರಿಬೇವಿನ ಸೊಪ್ಪು, ಶುಂಠಿ-ಬೆಳ್ಳುಳ್ಳಿ ಪೇಸ್ಟ್ ಸೇರಿಸಿ ಹಸಿ ವಾಸನೆ ಹೋಗುವವರೆಗೆ ಬೇಯಿಸಬೇಕು. ನಂತರ ಹೆಚ್ಚಿದ ಟೊಮೆಟೊ ಸೇರಿಸಿ ಅದು ಮೃದುವಾಗುವವರೆಗೆ ಫ್ರೈ ಮಾಡಿ.
ಅದಕ್ಕೆ ಕೊತ್ತಂಬರಿ ಪುಡಿ, ಗರಂ ಮಸಾಲೆ, ಕೆಂಪು ಮೆಣಸಿನ ಪುಡಿ ಹಾಗೂ ಉಪ್ಪು ಸೇರಿಸಿ ಮಿಶ್ರಣ ಮಾಡಿ. ಇದಕ್ಕೆ ಸ್ವಲ್ಪ ನೀರು ಸೇರಿಸಿ ಬೇಯಿಸಬೇಕು. ನಂತರ, ಸಣ್ಣ ತುಂಡುಗಳಾಗಿ ಕತ್ತರಿಸಿದ ಮೊಟ್ಟೆಗಳನ್ನು ಈ ಮಸಾಲೆಗೆ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ ಕೊನೆಗೆ ಕೊತ್ತಂಬರಿ ಸೊಪ್ಪು ಹಾಕಿದರೆ ಎಗ್ ಕೀಮಾ ರೆಡಿ.