ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ನಗದಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಡಿಸಿಎಂಗೆ ಸಿಎಂ ಅವಮಾನ ಮಾಡಿದ್ರು ಎಂಬ ಚರ್ಚೆಯ ನಡುವೆಯೇ ಸಿಎಂ ಸಿದ್ದರಾಮಯ್ಯ ಇಂದು ಡಿಕೆ ಶಿವಕುಮಾರ್ ಸಮ್ಮುಖದಲ್ಲೇ ಸ್ಪಷ್ಟನೆ ನೀಡಿದ್ದಾರೆ.
ಸಾಧನಾ ಸಮಾವೇಶದಲ್ಲಿ ಡಿಸಿಎಂ ಅರ್ಧಕ್ಕೆ ಎದ್ದು ಹೋಗಿದ್ದು, ಡಿಸಿಎಂ ಹೆಸರು ಹೇಳಿ ಎಂದ್ದಿದ್ದಕ್ಕೆ ಸಿಎಂ ಮನೆಯಲ್ಲಿ ಕೂತವರ ಹೆಸರು ಹೇಳೋಕೆ ಆಗಲ್ಲ ಎಂದಿದ್ದು ರಾಜಕೀಯವಾಗಿ ಬಹಳ ದೊಡ್ಡ ಚರ್ಚೆಗೆ ಗ್ರಾಸವಾಗಿತ್ತು.
ಇದೀಗ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ರನ್ನ ಪಕ್ಕದಲ್ಲೇ ನಿಲ್ಲಿಸಿಕೊಂಡು ನಿನ್ನೆಯ ಘಟನೆಗೆ ಸ್ಪಷ್ಟೀಕರಣ ಕೊಟ್ಟರು. ನಾನು ಡಿಕೆ ಶಿವಕುಮಾರ್‌ಗೆ ಅವಮಾನ ಮಾಡಿಲ್ಲ. ಅವರು ಸಭೆಯಲ್ಲಿ ಇಲ್ಲದ ಕಾರಣ ಅವರ ಹೆಸರು ಹೇಳಲಿಲ್ಲ ಅಷ್ಟೆ. ಇದರಲ್ಲಿ ಅವಮಾನದ ಪ್ರಶ್ನೆ ಎಲ್ಲಿಂದ ಬಂತು? ಬಿಜೆಪಿ ನನ್ನ ಮತ್ತು ಡಿಸಿಎಂ ಸಂಬಂಧ ಕೆಡಿಸಿ ಅದರ ರಾಜಕೀಯ ಲಾಭ ಪಡೆಯುವ ಭ್ರಮೆಯಲ್ಲಿ ಇದ್ದಾರೆ ಅಂತ ಕಿಡಿ ಕಾರಿದರು.