ಹೊಸದಿಗಂತ ಡಿಜಿಟಲ್ ಡೆಸ್ಕ್:
ನ್ಯಾಯಮೂರ್ತಿ ಯಶವಂತ್ ವರ್ಮಾ ಪದಚ್ಯುತಿಗಾಗಿ ಸಂಸತ್ತಿನಲ್ಲಿ ನಿರ್ಣಯ ಮಂಡಿಸುವ ನೋಟಿಸ್ ಗೆ ಈಗಾಗಲೇ 100 ಸಂಸದರು ಸಹಿ ಮಾಡಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಭಾನುವಾರ ತಿಳಿಸಿದ್ದಾರೆ.
ಸರ್ವ ಪಕ್ಷ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಿರಣ್ ರಿಜಿಜು, ಸಹಿ ಸಂಗ್ರಹ ನಡೆಯುತ್ತಿದೆ. ಈಗಾಗಲೇ 100 ಸಂಸದರು ಸಹಿ ಹಾಕಿದ್ದಾರೆ. ಯಾವಾಗ ನಿರ್ಣಯವನ್ನು ಮಂಡಿಸಬೇಕು ಎಂಬುದನ್ನು ಕಾರ್ಯ ಕಲಾಪ ಸಮಿತಿ ನಿರ್ಧರಿಸಲಿದೆ ಎಂದು ತಿಳಿಸಿದರು.
ನ್ಯಾಯಾಧೀಶರ ಪದಚ್ಯುತಿಗೆ ಲೋಕಸಭೆಯಲ್ಲಿ ಕನಿಷ್ಠ 100 ಸಂಸದರು ಮತ್ತು ರಾಜ್ಯಸಭೆಯಲ್ಲಿ 50 ಸಂಸದರು ಸಹಿ ಹಾಕಬೇಕು. ಲೋಕಸಭೆಯಲ್ಲಿ ನಿರ್ಣಯ ಮಂಡಿಸುವ ಸಾಧ್ಯತೆ ಇದೆ.