ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿಯಲ್ಲಿ ಮಧ್ಯಾಹ್ನದ ಹೊತ್ತಿಗೆ ನಗರದ ಹಲವೆಡೆ ಬಿರುಸಿನ ಮಳೆಯಾಗಿದೆ. ವಿಧಾನಸೌಧ, ರೇಸ್ ಕೋರ್ಸ್, ಮೆಜೆಸ್ಟಿಕ್, ಶೇಷಾದ್ರಿಪುರಂ, ಆರ್ಆರ್ ನಗರ ಸೇರಿ ವಿವಿಧ ಪ್ರದೇಶಗಳಲ್ಲಿ ಮಳೆಯಾಗಿದೆ.
ವರುಣನ ಆಗಮನದಿಂದ ರಾಜಧಾನಿ ವಾತಾವರಣ ಮತ್ತಷ್ಟು ಕೂಲ್ ಕೂಲ್ ಆಗಿದೆ. ಇನ್ನು ನಗರದ ವಿವಿಧೆಡೆ ಭಾರಿ ಮಳೆಯಿಂದ ಸಂಚಾರ ದಟ್ಟಣೆ ಉಂಟಾಗಿ, ವಾಹನ ಸವಾರರು ಪರದಾಡಿದರು.
ಬೆಂಗಳೂರು ಮತ್ತು ಸುತ್ತಮುತ್ತಲಿನ ಭಾಗದಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.