ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಗೇಮ್‌ ಆಡುತ್ತಾ ಕುಳಿತ ಕೃಷಿ ಸಚಿವ: ಸರಕಾರದ ವಿರುದ್ಧ ವಿಪಕ್ಷಗಳು ಕಿಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದ ವಿಧಾನಸಭೆಯ ಅಧಿವೇಶನದಲ್ಲಿ ಕೃಷಿ ಸಚಿವ ಮಾಣಿಕ್ರಾವ್ ಕೊಕಟೆ ಅವರು ರಮ್ಮಿ ಆಡುತ್ತಿರುವ ದೃಶ್ಯದ ವೀಡಿಯೋ ವೈರಲ್‌ ಆಗಿದ್ದು, ಟೀಕೆಗೆ ಗುರಿಯಾಗಿದೆ.

ಎನ್‌ಸಿಪಿ (ಶರದ್‌ಚಂದ್ರ ಪವಾರ್) ನಾಯಕ ರೋಹಿತ್ ಪವಾರ್ ಇಂದು ಆಡಳಿತ ಮೈತ್ರಿಕೂಟದ ವಿರುದ್ಧ ಹರಿಹಾಯ್ದಿದ್ದಾರೆ.

ರಾಜ್ಯದಲ್ಲಿ ಲೆಕ್ಕವಿಲ್ಲದಷ್ಟು ಕೃಷಿ ಸಮಸ್ಯೆಗಳು ಬಾಕಿ ಉಳಿದಿದ್ದರೂ, ಪ್ರತಿದಿನ 8 ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ, ಕೃಷಿ ಸಚಿವರಿಗೆ ಬೇರೆ ಏನೂ ಮಾಡಲು ಸಾಧ್ಯವಾಗದೆ ರಮ್ಮಿ ಆಡಲು ಸಮಯ ಸಿಕ್ಕಂತೆ ಕಾಣುತ್ತಿದೆ ಎಂದು ಪವಾರ್ ವ್ಯಂಗ್ಯವಾಡಿದ್ದಾರೆ.

ನಾನೇಕೆ ಆಟ ಆಡಲು ಅಲ್ಲಿ ಕುಳಿತುಕೊಳ್ಳಬೇಕು?
ಕ್ಯಾಮೆರಾ ಇದೆ ಅಂತ ಗೊತ್ತಾದಾಗ ನಾನೇಕೆ ಆಟ ಆಡಲು ಅಲ್ಲಿ ಕುಳಿತುಕೊಳ್ಳಬೇಕು? ಅಚಾನಕ್ಕಾಗಿ ಡೌನ್‌ಲೋಡ್‌ ಆಗುತ್ತಿದ್ದ ಆಟವನ್ನು ತಪ್ಪಿಸಲು ಪ್ರಯತ್ನಿಸಿದೆ. ಅದು ಸಾಧ್ಯವಾಗಲಿಲ್ಲ. ಆದರೆ, ಮುಂದೆ ಅದನ್ನು ಸರಿಪಡಿಸಿದ್ದೇನೆ ಎಂದು ಸಚಿವರು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

ಆ ವೀಡಿಯೋ ಬಳಸಿ ವಿರೋಧ ಪಕ್ಷವು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಸಚಿವರು ಬೇಸರ ವ್ಯಕ್ತಪಡಿಸಿದ್ದಾರೆ. ‘ಅಚಾನಕ್ಕಾಗಿ ಗೇಮ್‌ ಡೌನ್‌ಲೋಡ್‌ ಆಗುವುದನ್ನು ತಪ್ಪಿಸಲು ನಾನು ಪ್ರಯತ್ನಿಸಿದ್ದೆ. ನಂತರ ಅದನ್ನು ಸರಿಪಡಿಸಿಕೊಂಡೆ’ ನೀವು ಪೂರ್ಣ ವೀಡಿಯೊವನ್ನು ನೋಡಿದರೆ ಗೊತ್ತಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!