ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕೊರಿಯಾದ ಗ್ಯಾಪ್ಯೊಂಗ್ ಕೌಂಟಿಯಲ್ಲಿ ಭಾನುವಾರ ಸಂಭವಿಸಿದ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, 17 ಮಂದಿ ಮೃತಪಟ್ಟಿದ್ದಾರೆ.
ಮನೆಗಳು ಮತ್ತು ಶಿಬಿರಗಳು ಜಲಾವೃತಗೊಂಡಿದ್ದು, ವಾಹನಗಳು ಪ್ರವಾಹಕ್ಕೆ ಸಿಲುಕಿವೆ. ಹಲವಾರು ಮಂದಿ ಕಾಣೆಯಾಗಿದ್ದಾರೆ.
ಬುಧವಾರ ಮಳೆ ಆರಂಭವಾದಾಗಿನಿಂದ ದೇಶಾದ್ಯಂತ ಸಾವಿನ ಸಂಖ್ಯೆ 17 ಕ್ಕೆ ಏರಿದ್ದು, 11 ಜನರು ಕಾಣೆಯಾಗಿದ್ದಾರೆ, 13,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ.