ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ನಟ ದರ್ಶನ್ ಮತ್ತು ತಂಡದ ಜಾಮೀನು ರದ್ದುಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ, ನಾಳೆ ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದೆ.
ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪರ್ದಿವಾಲಾ, ನ್ಯಾಯಮೂರ್ತಿ ಮಹದೇವನ್ ನೇತೃತ್ವದ ಪೀಠದಲ್ಲಿ ವಿಚಾರಣೆ ನಡೆಯಲಿದೆ.
ನಟ ದರ್ಶನ್ ಸೇರಿ 7 ಆರೋಪಿಗಳ ಜಾಮೀನು ರದ್ದು ಕೋರಿರುವ ಅರ್ಜಿಯ ವಿಚಾರಣೆಯನ್ನು ನಾಳೆ ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದೆ. ಸುಪ್ರೀಂ ಕೋರ್ಟ್ ನಲ್ಲಿ ಅಂತಿಮ ಹಂತದ ವಿಚಾರಣೆ ನಡೆಯಲಿದೆ.
ರಾಜ್ಯ ಸರ್ಕಾರ ಪರ ವಕೀಲರ ವಾದ ಆಲಿಸಿ, ದಾಖಲೆಗಳನ್ನು ಸ್ವೀಕರಿಸಿರುವ ಪೀಠ, ನಾಳೆ ಆರೋಪಿಗಳ ಪರ ವಕೀಲರ ವಾದ ಮಂಡನೆಯನ್ನು ಕೇಳಲಿದ್ದು, ಬಳಿಕ ಅಂತಿಮ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ.
ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ಸರ್ಕಾರ, ಪೊಲೀಸ್ ಇಲಾಖೆ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ ಲೂಥ್ರಾ ವಾದ ಮಂಡಿಸಿದ್ದು, ನಟ ದರ್ಶನ್ ಪರವಾಗಿ ಹಿರಿಯ ನ್ಯಾಯವಾದಿ ಅಭಿಷೇಕ್ ಮನು ಸಿಂಘ್ವಿ ನಿಯೋಜಿಸಲಾಗಿತ್ತು. ಆದರೆ ಅಭಿಷೇಕ್ ಮನು ಸಿಂಘ್ವಿ ಸದ್ಯ ಕರ್ನಾಟಕದ ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯ ಹಾಗೂ ಕರ್ನಾಟಕ ಸರ್ಕಾರದ ಪರ ವಾದ ಮಂಡನೆ ಮಾಡುತ್ತಿದ್ದಾರೆ. ಅವರೇ ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ಸರ್ಕಾರ ವಿರುದ್ಧ ವಾದ ಮಾಡುವುದು ಸೂಕ್ತವಲ್ಲ ಎಂಬ ಕಾರಣಕ್ಕೆ ದರ್ಶನ್ ಈಗ ಹಿರಿಯ ವಕೀಲ ಕಪಿಲ್ ಸಿಬಲ್ ಅವರನ್ನು ನೇಮಿಸಿಕೊಂಡಿದ್ದು ಮಂಗಳವಾರ ಸಿಬಲ್ ವಾದ ಮಂಡಿಸಲಿದ್ದಾರೆ. ಇದಾದ ಬಳಿಕ ಉಳಿದ ಆರೋಪಿಗಳ ಪರ ವಕೀಲರು ವಾದ ಮಂಡಿಸಲಿದ್ದಾರೆ.