ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಇಂದಿರಾ ಗಾಂಧಿ ವಿಮಾನ ನಿಲ್ದಾಣದಲ್ಲಿ ಇಳಿದ ಏರ್ ಇಂಡಿಯಾ ವಿಮಾನ ಲ್ಯಾಂಡಿಂಗ್ ಆಗುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ದಿಡೀರ್ ಬೆಂಕಿ ವಿಮಾನ ಆವರಿಸಿಕೊಂಡಿದೆ.
ಏರ್ ಇಂಡಿಯಾ ಎ171 ವಿಮಾನ ದುರಂತದ ಬಳಿಕ ಎಲ್ಲಾ ವಿಮಾನಗಳ ತಪಾಸಣೆಗೆ ನಾಗರೀಕರ ವಿಮಾಯಾನ ಸಚಿವಾಲಯ ಆದೇಶ ನೀಡಿದೆ. ಸುರಕ್ಷತೆಗೆ ಮೊದಲ ಆದ್ಯತೆ ನೀಡುವಂತೆ ಖಡಕ್ ವಾರ್ನಿಂಗ್ ನೀಡಿದೆ. ವಿಮಾಯಾನದ ಮಹಾ ದುರಂತದ ಕೆಲವೇ ದಿನಗಳ ಬಳಿಕ ಇದೀಗ ಮತ್ತೊಂದು ಏರ್ ಇಂಡಿಯಾ ವಿಮಾನ ಆತಂಕದ ಪರಿಸ್ಥಿತಿ ಎದುರಿಸಿದೆ.
ಅದೃಷ್ಠವಶಾತ್ ವಿಮಾನದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.
ಏರ್ ಇಂಡಿಯಾ ವಿಮಾನ 315 ಹಾಂಕಾಂಗ್‌ನಿಂದ ಪ್ರಯಾಣಿಕರ ಹೊತ್ತು ದೆಹೆಲಿಯತ್ತ ಸಾಗಿತ್ತು. ಆದರೆ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುತ್ತಿದ್ದಂತೆ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ದೆಹಲಿಯಲ್ಲಿ ವಿಮಾನ ಯಶಸ್ವಿಯಾಗಿ ಲ್ಯಾಂಡಿಂಗ್ ಆಗಿದೆ. ರನ್‌ವೇಯಲ್ಲಿ ವೇಗವಾಗಿ ಸಾಗಿದ ವಿಮಾನ ನಿಧಾನವಾಗಿ ವಿಮಾನ ನಿಲ್ದಾಣದಲ್ಲಿ ನಿಂತಿದೆ. ಪ್ರಯಾಣಿಕರು ತಮ್ಮ ತಮ್ಮ ಬ್ಯಾಗ್ ಹಿಡಿದು ಇನ್ನೇನು ಇಳಿಯಬೇಕು ಅನ್ನುವಷ್ಟರಲ್ಲೇ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೀಗಾಗಿ ಪ್ರಯಾಣಿಕರಿಗೆ ಅಲರ್ಟ್ ನೀಡಲಾಗಿದೆ. ತಕ್ಷಣವೇ ಪ್ರಯಾಣಿಕರನ್ನು ವಿಮಾನದಿಂದ ಇಳಿಸಲಾಗಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದೆ.ಆದರೆ ಎಪಿಯು ಯುನಿಟ್ ಆಟೋಮ್ಯಾಟಿಕ್ ಆಗಿ ಸ್ಥಗಿತಗೊಂಡಿದೆ. ಹೀಗಾಗಿ ಹೆಚ್ಚಿನ ಅನಾಹುತ ಸಂಭವಿಸಿಲ್ಲ.
ಬೆಂಕಿ ಕಾಣಿಸಿಕೊಂಡಿರುವ ಕುರಿತು ಏರ್ ಇಂಡಿಯಾ ಸ್ಪಷ್ಟಪಡಿಸಿದೆ. ಎಲ್ಲಾ ಪ್ರಯಾಣಿಕರು ಹಾಗೂ ವಿಮಾನ ಸಿಬ್ಬಂದಿಗಳು ಸುರಕ್ಷಿತವಾಗಿದ್ದಾರೆ. ಮುಂದಿನ ತನಿಖೆ ನಡೆಯಲಿದೆ ಎಂದಿದೆ.