ಹೊಸದಿಗಂತ ಡಿಜಿಟಲ್ ಡೆಸ್ಕ್:
ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಮತ್ತೆ ನಾಲ್ವರನ್ನು ಬಂಧಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ಕೊಲೆಯಲ್ಲಿ ಭಾಗಿಯಾಗಿದ್ದ ಆರೋಪದಡಿ ಅವಿನಾಶ್, ಮುರುಗೇಶ್, ನರಸಿಂಹ ಹಾಗೂ ಸುದರ್ಶನ್ ಎಂಬುವರನ್ನ ಕೋಲಾರದ ಟೆಕಲ್ ಬಳಿ ಇಂದು ಬಂಧಿಸಿ ನಗರಕ್ಕೆ ಕರೆತರಲಾಗಿದೆ. ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಪಡಿಗೆ ಪಡೆದು ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ಧಾರೆ.
ಹಳೆದ್ವೇಷ ಹಾಗೂ ಜಮೀನು ವಿಚಾರಕ್ಕಾಗಿ ಜುಲೈ 15ರಂದು ಭಾರತೀನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆ ಬಳಿ ಬಿಕ್ಲು ಶಿವನನ್ನ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.
ಹತ್ಯೆ ಬಳಿಕ ಕಿರಣ್, ವಿಮಲ್, ಪ್ರದೀಪ್, ಮದನ್ ಹಾಗೂ ಸ್ಯಾಮ್ಯುವೆಲ್ ಎಂಬವರನ್ನು ಬಂಧಿಸಲಾಗಿತ್ತು. ಕೃತ್ಯ ನಡೆಸಲು ಕಾರು ನೀಡಿದ ಆರೋಪ ಮೇರೆಗೆ ಅರುಣ್ ಹಾಗೂ ನವೀನ್ ಎಂಬವರನ್ನು ಬಂಧಿಸಲಾಗಿತ್ತು. ಇದೀಗ ಹತ್ಯೆಗೆ ಸುಪಾರಿ ಪಡೆದ ಆರೋಪದಡಿ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ಧಾರೆ.