ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಂದು ಲೀಟರ್ ಹಾಲು ಕೊಂಡವರೂ ಕೂಡ ಫೋನ್ ಪೇ ಗೂಗಲ್ ಪೇ ಮಾಡುತ್ತಾರೆ, ಹಾಗೆ ಒಂದು ರೂಪಾಯಿಯ ಚಾಕೋಲೆಟ್ ತೆಗೆದುಕೊಂಡವರು ಕೂಡ ಯುಪಿಐ ಬಳಕೆ ಮಾಡಿ ಹಣ ಟ್ರಾನ್ಸ್ಫರ್ ಮಾಡುತ್ತಾರೆ. ಹೀಗಿರುವಾಗ ಯುಪಿಐ ಬಳಕೆ ಮಾಡುವ ಅಂಗಡಿಗಳಿಗೆ ಟ್ಯಾಕ್ಸ್ ಜಾರಿಮಾಡಲಾಗುತ್ತಿದೆ.
ಲಕ್ಷ ಲಕ್ಷ ತೆರಿಗೆ ನೋಟಿಸ್ ನೋಡಿ ವ್ಯಾಪಾರಿಗಳು ದಿಕ್ಕೆಟ್ಟು ಹೋಗಿದ್ದಾರೆ. ಇದರ ವಿರುದ್ಧ ಸಿಡಿದೆದ್ದಿರುವ ಅಂಗಡಿ ಮಾಲೀಕರು, ಇಂದಿನಿಂದ ಹೋರಾಟಕ್ಕೆ ಸಜ್ಜಾಗಿದ್ದಾರೆ.
ವಾಣಿಜ್ಯ ತೆರಿಗೆ ಇಲಾಖೆಯ ನೋಟಿಸ್ ವಿರುದ್ಧ ವರ್ತಕರು ಸಮರ ಸಾರಿದ್ದಾರೆ. ಇಂದಿನಿಂದ ಹಾಲು, ಹಾಲಿನ ಉತ್ಪನ್ನ ಮಾರಾಟ ಬಂದ್ ಮಾಡಲಾಗುತ್ತದೆ. ಹಾಲು ಬಳಸದೆ ಟೀ-ಕಾಫಿ ಮಾಡುವ ಮೂಲಕ ಆಕ್ರೋಶ ಹೊರಹಾಕಲಿದ್ದಾರೆ. ಪ್ರತಿಭಟನಾರ್ಥವಾಗಿ ಕಪ್ಪು ಪಟ್ಟಿ ಧರಿಸಿ ಇತರೆ ವಸ್ತುಗಳ ಮಾರಾಟ ಮಾಡಲಾಗುತ್ತದೆ. ಜುಲೈ 25ರಂದು ಅಂಗಡಿ ಬಂದ್ ಮಾಡಿ, ಕುಟುಂಬ ಸಮೇತರಾಗಿ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಹೋರಾಟ ನಡೆಸಲಿದ್ದಾರೆ.